ಸೋಮವಾರ, ಆಗಸ್ಟ್ 2, 2021
21 °C

ವಿಶೇಷ ಅಭಿಯಾನದಲ್ಲಿ ಕೋವಿಡ್‌ ಲಸಿಕೆ ಪಡೆದ 7,903 ಜನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಭಾಲ್ಕಿ: ‘ಪ್ರತಿಯೊಬ್ಬರೂ ಲಸಿಕೆ ಪಡೆದು ರಾಷ್ಟ್ರವನ್ನು ಕೊರೊನಾ ಮುಕ್ತವಾಗಿಸಬೇಕಾಗಿದೆ’ ಎಂದು ಲಸಿಕಾ ಅಭಿಯಾನದ ನೋಡಲ್ ಅಧಿಕಾರಿ ಸೂರ್ಯಕಾಂತ ಪಾಟೀಲ ಹೇಳಿದರು.

ತಾಲ್ಲೂಕಿನ ಕುರುಬಖೇಳಗಿ ಗ್ರಾಮ ಪಂಚಾಯಿತಿಯಲ್ಲಿ ಸೋಮವಾರ ಆಯೋಜಿಸಿದ್ದ ವಿಶೇಷ ಲಸಿಕಾಕರಣಕ್ಕೆ ಚಾಲನೆ ನೀಡಿ ಮಾತನಾಡಿದರು.

ತಹಶೀಲ್ದಾರ್‌ ಅಣ್ಣಾರಾವ್‌ ಪಾಟೀಲ ಮಾತನಾಡಿ, ‘ಜಿಲ್ಲಾಧಿಕಾರಿ ಅವರು ತಾಲ್ಲೂಕಿಗೆ 5 ಸಾವಿರ ಲಸಿಕೆ ಹಾಕಿಸುವ ಗುರಿ ನಿಗದಿಪಡಿಸಿದ್ದಾರೆ. ನಾವು ಪ್ರತಿ ಗ್ರಾ.ಪಂ.ಗೆ ಕನಿಷ್ಠ 100 ಲಸಿಕೆ ಹಾಕಿಸುವ ಗುರಿ ನಿಗದಿಪಡಿಸಿದ್ದೇವೆ. ಜಿಲ್ಲೆಯಲ್ಲಿ ಅತಿ ಹೆಚ್ಚು ಲಸಿಕೆ ಹಾಕಿಸಿದ ಒಟ್ಟು 3 ಗ್ರಾ.ಪಂ.ಗಳಿಗೆ ತಲಾ ₹4 ಸಾವಿರ, ₹3 ಸಾವಿರ, ₹2 ಸಾವಿರ ಬಹುಮಾನ ಮತ್ತು ಅಭಿನಂದನಾ ಪ್ರಮಾಣ ಪತ್ರ ನೀಡಲಾಗುವುದು’ ಎಂದು ತಿಳಿಸಿದರು.

ತಾಲ್ಲೂಕಿನಲ್ಲಿ ಒಂದೇ ದಿನ ಒಟ್ಟು 7,903 ಜನ ಕೊರೊನಾ ಲಸಿಕೆ ಪಡೆದಿದ್ದಾರೆ.

ಡಾವರಗಾಂವ ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ. ಪ್ರವೀಣ ಕುರುಬಖೇಳಗಿ, ಪಿಡಿಒ ಬಸವರಾಜ, ಮುಖ್ಯಶಿಕ್ಷಕ ಜಯರಾಜ ದಾಬಶೆಟ್ಟಿ, ಆರೋಗ್ಯ ಇಲಾಖೆಯ ಸುಮಿತಾ ಉಪಸ್ಥಿತರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು