ಶುಕ್ರವಾರ, ಡಿಸೆಂಬರ್ 2, 2022
19 °C

ಕುಶಲಕರ್ಮಿಗಳಿಗೆ ಉಜ್ವಲ ಭವಿಷ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಕೌಶಲ ಹೊಂದಿದ ಐಟಿಐ ಕುಶಲಕರ್ಮಿಗಳಿಗೆ ಉಜ್ವಲ ಭವಿಷ್ಯ ಇದೆ ಎಂದು ಕೈಗಾರಿಕೆ ತರಬೇತಿ, ಉದ್ಯೋಗ ಇಲಾಖೆಯ ಕಲಬುರಗಿ ವಿಭಾಗದ ಜಂಟಿ ನಿರ್ದೇಶಕ ರಾಜೇಶ ಬಾವಗಿ ನುಡಿದರು. ಇಲ್ಲಿಯ ಸರ್ಕಾರಿ ಕೈಗಾರಿಕೆ ತರಬೇತಿ ಸಂಸ್ಥೆಯಲ್ಲಿ ಆಯೋಜಿಸಿದ್ದ ಜಿಲ್ಲಾಮಟ್ಟದ ಶಿಕ್ಷಕ ಪರ್ವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಐಟಿಐ ತರಬೇತುದಾರರು ಕೌಶಲ ಅಳವಡಿಸಿಕೊಂಡಲ್ಲಿ ಕೌಶಲ ಭಾರತದ ಕನಸು ನನಸಾಗಲಿದೆ ಎಂದು ತಿಳಿಸಿದರು. ಜಿಲ್ಲಾ ನೋಡಲ್ ಅಧಿಕಾರಿ ಶಿವಶಂಕರ ಟೋಕರೆ ಮಾತನಾಡಿದರು. ಸಹ ಶಿಕ್ಷಕ ಶಿವಲಿಂಗ ಹೇಡೆ ವಿಶೇಷ ಉಪನ್ಯಾಸ ನೀಡಿದರು. ಸಿಪಿಐ ಕೃಷ್ಣಕುಮಾರ ಪಾಟೀಲ ಕಾರ್ಯಕ್ರಮ ಉದ್ಘಾಟಿಸಿದರು. ಹುಲಸೂರಿನ ಶಿವಾನಂದ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು.

20 ಕಿರಿಯ ತರಬೇತಿ ಅಧಿಕಾರಿಗಳಿಗೆ ಕೌಶಲ ರಶ್ಮಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರಕಾಶ ಜನವಾಡಕರ್ ಸ್ವಾಗತಿಸಿದರು. ಬಾಬು ಪ್ರಭಾಜಿ ನಿರೂಪಿಸಿದರು. ಪ್ರಶಾಂತ ಜ್ಯಾಂತಿಕರ್ ವಂದಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.