ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾನಪದ ಜೀವನ ಮೌಲ್ಯಗಳ ಸಂಗಮ

ಜಾನಪದ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ದೇಶಪಾಂಡೆ ಅಭಿಮತ
Last Updated 9 ಫೆಬ್ರುವರಿ 2021, 13:58 IST
ಅಕ್ಷರ ಗಾತ್ರ

ಬೀದರ್‌: ‘ಜಾನಪದ ಜೀವನ ಮೌಲ್ಯಗಳ ಸಂಗಮವಾಗಿದೆ’ ಎಂದು ಸಾಹಿತಿ ಎಂ.ಜಿ.ದೇಶಪಾಂಡೆ ಅಭಿಪ್ರಾಯಪಟ್ಟರು.

ಇಲ್ಲಿಯ ಕರ್ನಾಟಕ ಸಾಹಿತ್ಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಜನಪದ ಸಾಹಿತ್ಯ ಉತ್ಸವ ಮತ್ತು ಎರಡನೇ ಜಿಲ್ಲಾ ಜಾನಪದ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಕಾವ್ಯ, ಕಲೆ, ಕೋಲಾಟ, ಭಜನೆ ಸೇರಿದಂತೆ ಹಲವು ಜಾನಪದ ಕಲೆಗಳು ಈ ಜಿಲ್ಲೆಯಲ್ಲಿ ಮೇಳೈಸಿವೆ. ಅದಕ್ಕೆ ಪೂರಕವಾಗಿ ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾ ಘಟಕವು ಈ ಕಲೆಯನ್ನು ಬೆಳೆಸುವ ಉದ್ದೇಶದಿಂದ ನಿರಂತರವಾಗಿ ಶ್ರಮಿಸುತ್ತಿದೆ’ ಎಂದು ಕೊಂಡಾಡಿದರು.

‘ಜಾನಪದ ಸಮ್ಮೇಳನದಲ್ಲಿ ನಡೆದ ಕವಿಗೋಷ್ಠಿ, ಕಲೆಗಳ ಪ್ರದರ್ಶನ ಜಿಲ್ಲೆಗೆ ಶೋಭೆ ತಂದುಕೊಟ್ಟಿವೆ. ರಾಣಿ ಸತ್ಯಮೂರ್ತಿ ಅವರನ್ನು ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಮಾಡಿರುವುದು ಸ್ತುತ್ಯಾರ್ಹವಾಗಿದೆ’ ಎಂದು ಹೇಳಿದರು.

ಸಾಹಿತಿ ಚಂದ್ರಪ್ಪ ಹೆಬ್ಬಾಳಕರ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬಸವ ತತ್ವ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ವೈಜಿನಾಥ ಕಮಠಾಣೆ, ನಿವೃತ್ತ ಪ್ರಾಚಾರ್ಯ ಪ್ರೊ.ಎಸ್.ಬಿ. ಬಿರಾದಾರ, ಹಿರಿಯ ಸಾಹಿತಿ ಮಾನಶೆಟ್ಟಿ ಬೆಳಕೇರಿ, ಕರ್ನಾಟಕ ಸಾಹಿತ್ಯ ಸಂಘ ಟ್ರಸ್ಟ್ ಅಧ್ಯಕ್ಷ ಶಂಕ್ರೆಪ್ಪ ಹೊನ್ನಾ, ಚಿಂತಕಿ ಲುಂಬಿಣಿ ಗೌತಮ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT