ಭಾನುವಾರ, 15 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಪ್ರಿಯಕರನಿಂದ ಯುವತಿ ಕೊಲೆ

Published : 4 ಸೆಪ್ಟೆಂಬರ್ 2024, 15:38 IST
Last Updated : 4 ಸೆಪ್ಟೆಂಬರ್ 2024, 15:38 IST
ಫಾಲೋ ಮಾಡಿ
Comments

ಬಸವಕಲ್ಯಾಣ: ತಾಲ್ಲೂಕಿನ ಗುಣತೀರ್ಥವಾಡಿಯಲ್ಲಿ ಈಚೆಗೆ ನಡೆದಿದ್ದ ಭಾಗ್ಯಶ್ರೀಯ ಕೊಲೆ ಆರೋಪದ ಸಂಬಂಧ ಪೊಲೀಸ್ ಇಲಾಖೆಯವರು ತನಿಖೆ ಕೈಗೊಂಡಿದ್ದು ಆಕೆಯ ಪ್ರಿಯಕರನೇ ಕೊಲೆ ಮಾಡಿರುವುದು ತಾಂತ್ರಿಕ ಸಾಕ್ಷಾಧಾರಗಳಿಂದ ಖಚಿತವಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟೆ ತಿಳಿಸಿದ್ದಾರೆ.

ಅವರು ಬುಧವಾರ ಪ್ರಕಟಣೆ ಹೊರಡಿಸಿ ಈ ಮಾಹಿತಿ ನೀಡಿದ್ದಾರೆ. ಭಾಗ್ಯಶ್ರೀಯ ತಂದೆ ತಾಯಿ ಮೊದಲೇ ಕೊಲೆ ನಡೆದಿರುವ ಬಗ್ಗೆ ದೂರು ನೀಡಿದ್ದರು. ಪ್ರಿಯಕರನು ಮದುವೆ ಮಾಡಿಕೊಳ್ಳದೆ ಯುವತಿಯ ತಲೆಮೇಲೆ ಕಲ್ಲು ಹಾಕಿ ಕೊಲೆ ಮಾಡಿದ್ದಾನೆ. ಈತನು ಅದೇ ಊರಿನವನಾಗಿದ್ದಾನೆ. ಇನ್ನಿಬ್ಬರು ಈತನಿಗೆ ಸಹಕಾರ ನೀಡಿದ್ದು ಅವರ ಪತ್ತೆಗಾಗಿ ಜಾಲ ಬೀಸಲಾಗಿದೆ. ಮೃತಳು ಪರಿಶಿಷ್ಟ ಪಂಗಡಕ್ಕೆ ಸೇರಿದ್ದರಿಂದ ಈ ಪಂಗಡದ ಕಾಯ್ದೆ ಅನ್ವಯ ಹಾಗೂ ಅತ್ಯಾಚಾರ ಪ್ರಕರಣವೆಂದು ಪರಿಗಣಿಸಿ ದೂರು ದಾಖಲಿಸಿಕೊಳ್ಳಲಾಗಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT