ಶನಿವಾರ, ಜನವರಿ 28, 2023
20 °C

ಭವಾನಿ ದೇವಿ ಭವ್ಯ ಮೆರವಣಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೀದರ್‌: ಐತಿಹಾಸಿಕ ಬೀದರ್‌ ಕೋಟೆಯೊಳಗಿನ ಭವಾನಿ ಮಂದಿರದಲ್ಲಿ ನವರಾತ್ರಿಯ ಪ್ರಯುಕ್ತ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.

ಬುಧವಾರ ಒಳಕೋಟೆಯ ದೇವಿ ಮಂದಿರದ ಆವರಣದಿಂದ ಓಲ್ಡ್‌ಸಿಟಿಯ ಶಹಾಗಂಜ್‌ ಹನುಮಾನ ಮಂದಿರದ ವರೆಗೆ ಭವಾನಿ ದೇವಿಯ ಮೆರವಣಿಗೆ ನಡೆಯಿತು. ಟ್ರ್ಯಾಕ್ಟರ್‌ನಲ್ಲಿ ವಿಶೇಷ ಮಂಟಪ ನಿರ್ಮಿಸಿ ಅದರಲ್ಲಿ ಸಿಂಹಾರೂಢ ಮೂರ್ತಿಯ ಮೆರವಣಿಗೆ ಮಾಡಲಾಯಿತು.

ಮೆರವಣಿಗೆ ಮುಂಚೂಣಿಯಲ್ಲಿದ್ದ ಹಲಗೆ ಮೇಳದವರ ವಾದನಕ್ಕೆ ಮಂಗಳಮುಖಿಯರು ನೃತ್ಯ ಮಾಡಿ ಗಮನ ಸೆಳೆದರು.
ಹಬ್ಬದ ಪ್ರಯುಕ್ತ ಮಹಿಳೆಯರು ಹಾಗೂ ಮಕ್ಕಳು ಹೊಸ ಬಟ್ಟೆ ತೊಟ್ಟು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು