ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕೇಂದ್ರ ಸರ್ಕಾರದ ವಿರುದ್ಧ ಏಕಾಂಗಿ ಧರಣಿ

Published 21 ಡಿಸೆಂಬರ್ 2023, 16:15 IST
Last Updated 21 ಡಿಸೆಂಬರ್ 2023, 16:15 IST
ಅಕ್ಷರ ಗಾತ್ರ

ಬೀದರ್: ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿರುವ ಕಾರಣ ಕೇಂದ್ರ ಸರ್ಕಾರವನ್ನು ಕೂಡಲೇ ವಜಾಗೊಳಿಸಬೇಕು ಎಂದು ಒತ್ತಾಯಿಸಿ ವಿಶ್ವಕ್ರಾಂತಿ ದಿವ್ಯ ಪೀಠದ ಅಧ್ಯಕ್ಷ ಓಂಪ್ರಕಾಶ ರೊಟ್ಟೆ ಗುರುವಾರ ಇಲ್ಲಿಯ ಅಂಬೇಡ್ಕರ್ ವೃತ್ತದಲ್ಲಿ ಏಕಾಂಗಿ ಧರಣಿ ನಡೆಸಿ ಗಮನ ಸೆಳೆದರು.

ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸರ್ವಾಧಿಕಾರಿ ಧೋರಣೆ ತೋರುತ್ತಿದ್ದಾರೆ. ದೇಶದಲ್ಲಿ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸಲಾಗುತ್ತಿದೆ ಎಂದು ಆರೋಪಿಸಿದರು.

ಸಂಸತ್ತಿನಲ್ಲೇ ಭದ್ರತಾ ಲೋಪ ನಡೆದು ಹೋಗಿದೆ. ಲೋಕಸಭೆ ಹಾಗೂ ರಾಜ್ಯಸಭೆಯ 143 ಸದಸ್ಯರನ್ನು ಅಮಾನತಿನಲ್ಲಿ ಇಟ್ಟಿರುವುದು ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ ಎಂದು ದೂರಿದರು.

ನೂತನ ಸಂಸತ್ ಭವನದ ಉದ್ಘಾಟನಾ ಸಮಾರಂಭಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸದೆ ಸ್ತ್ರೀ ಕುಲಕ್ಕೆ ಅವಮಾನ ಮಾಡಲಾಗಿದೆ. ಮಣಿಪುರದಲ್ಲಿ ನಡೆದ ಮಾನವ ಹಕ್ಕುಗಳ ಉಲ್ಲಂಘನೆಗೆ ಕೇಂದ್ರ ಹಾಗೂ ಮಣಿಪುರ ಸರ್ಕಾರಗಳೇ ಹೊಣೆಯಾಗಿವೆ ಎಂದು ಆಪಾದಿಸಿದರು.

ಕೇಂದ್ರ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ನೀಡಿದ್ದ ಯುವಕರಿಗೆ ಉದ್ಯೋಗ ಸೃಷ್ಟಿಯ ಭರವಸೆ ಈಡೇರಿಸಿಲ್ಲ. ಬದಲಾಗಿ, ಉದ್ಯೋಗ ಕಸಿದುಕೊಳ್ಳುತ್ತಿದೆ. ಸರ್ಕಾರಿ ಸ್ವಾಮ್ಯದ ಕಂಪನಿಗಳನ್ನು ಖಾಸಗೀಕರಣಗೊಳಿಸುತ್ತಿದೆ ಎಂದು ಆಪಾದಿಸಿದರು.

ಚುನಾವಣೆ ಆಯುಕ್ತರ ನೇಮಕಾತಿಗೆ ಸಂಬಂಧಿಸಿದ ತಿದ್ದುಪಡಿ ಮಸೂದೆಯು ನೇಮಕಕ್ಕೆ ಅನುಸರಿಸಬೇಕಾದ ಮಾನದಂಡಗಳನ್ನು ಒಳಗೊಂಡಿಲ್ಲ. ಸರ್ಕಾರ, ಸರ್ವೋಚ್ಚ ನ್ಯಾಯಾಲಯದ ಮಾರ್ಗಸೂಚಿಗಳಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ ಎಂದು ದೂರಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT