ಹುಮನಾಬಾದ್ (ಬೀದರ್ ಜಿಲ್ಲೆ) : ಅವಸರದಲ್ಲಿ ರೈಲು ಹತ್ತುವಾಗ ಕಾಲು ಜಾರಿ ಅದರಡಿ ಬಿದ್ದು ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಪಟ್ಟಣದ ರೈಲು ನಿಲ್ದಾಣದಲ್ಲಿ ಬುಧವಾರ ನಡೆದಿದೆ.

ಮೃತ ವಿಜಯಾನಂದ ( 31) ಕಲಬುರಗಿಯ ಬಸವ ನಗರದ ನಿವಾಸಿ ಎಂದು ಗುರುತಿಸಲಾಗಿದೆ.

‘ವಿಜಯಾನಂದ ಅವರು ತನ್ನ ಸಹೋದರನೊಂದಿಗೆ ಭಾಲ್ಕಿ ತಾಲ್ಲೂಕಿನ ಮೈಲಾರ ಮಲ್ಲಣ್ಣ ದೇವಸ್ಥಾನಕ್ಕೆ ಹೋಗಲು ಬೀದರ್–ಕಲಬುರಗಿ ಡೆಮು ರೈಲಿನಲ್ಲಿ ಪಯಣ ಬೆಳೆಸಿದ್ದಾರೆ. ಕಲಬುರಗಿಯಿಂದ ಹೊರಟ ರೈಲು ಹುಮನಾಬಾದ್ ರೈಲು ನಿಲ್ದಾಣದಲ್ಲಿ ನಿಂತಿತ್ತು. ಈ ವೇಳೆ ವಿಜಯಾನಂದ ಕೆಳಗಿಳಿದು ನೀರು ತರಲು ಹೋಗಿದ್ದಾರೆ. ಈ ವೇಳೆ ರೈಲು ಚಲಿಸಲಾರಂಭಿಸಿದೆ. ಅವಸರದಲ್ಲಿ ಓಡುತ್ತ ರೈಲು ಹತ್ತುವಾಗ ಕಾಲು ಜಾರಿ ಅದರಡಿ ಬಿದ್ದಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ’ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.