ಗುರುವಾರ , ಜುಲೈ 16, 2020
24 °C

ಬೀದರ್ | ಕ್ವಾರಂಟೈನ್ ಕೇಂದ್ರದಲ್ಲಿ ವ್ಯಕ್ತಿ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಔರಾದ್: ತಾಲ್ಲೂಕಿನ ವನಮಾರಪಳ್ಳಿ ಗ್ರಾಮದ ಕಿತ್ತೂರ ರಾಣಿ ಚನ್ನಮ್ಮ ವಸತಿ ನಿಲಯದ ಕ್ವಾರಂಟೈನ್‌ ಕೇಂದ್ರದಲ್ಲಿ ವ್ಯಕ್ತಿಯೊಬ್ಬರು ಮಂಗಳವಾರ ಬೆಳಿಗ್ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ತಾಲ್ಲೂಕಿನ ರಾಯಣ‍ಪುರ ಗ್ರಾಮದ 22 ವರ್ಷದ ಈ ವ್ಯಕ್ತಿ ಮೇ 19ರಂದು ಪತ್ನಿಯ ಜೊತೆ ಮುಂಬೈನಿಂದ ಬಂದು ಕ್ವಾರಂಟೈನ್‌ಗೆ ಒಳಗಾಗಿದ್ದರು. ಪತ್ನಿ ನೀರು ತರಲು ಹೋದ ವೇಳೆ, ಅವರು ನೇಣು ಹಾಕಿಕೊಂಡಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಮತ್ತು ಅಧಿಕಾರಿಗಳು ಕ್ವಾರಂಟೈನ್ ಕೇಂದ್ರಕ್ಕೆ ಭೇಟಿ, ನೀಡಿ ಪರಿಶೀಲಿಸಿದರು. ಔರಾದ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು