ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯಮಟ್ಟದ ಪಶು ಮೇಳಕ್ಕೆ ಚಾಲನೆ

Last Updated 7 ಫೆಬ್ರುವರಿ 2020, 13:52 IST
ಅಕ್ಷರ ಗಾತ್ರ

ಬೀದರ್: ರಾಜ್ಯ ಮಟ್ಟದ ಪಶು ಮೇಳಕ್ಕೆ ಬೀದರ್ ತಾಲ್ಲೂಕಿನ ಕಮಠಾಣ ಬಳಿ ಇರುವ ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆವರಣದಲ್ಲಿ ಶುಕ್ರವಾರ ಚಾಲನೆ ದೊರೆಯಿತು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮೇಳವನ್ನು ಉದ್ಘಾಟಿಸಿದರು. ಮೂರು ದಿನಗಳ ಮೇಳಕ್ಕೆ ರಾಜ್ಯದ ವಿವಿಧ ಜಿಲ್ಲೆ ಹಾಗೂ ನೆರೆ ರಾಜ್ಯಗಳ ಆಕಳು, ಎಮ್ಮೆ, ಎತ್ತು, ಹೋರಿ, ಕುರಿ, ಮೇಕೆ, ಟಗರು, ಕೋಳಿ, ಹುಂಜ, ಮೀನು, ಗಿಳಿ, ಹಂದಿ, ನಾಯಿ ಮೊದಲಾದ ಪ್ರಾಣಿ, ಪಕ್ಷಿಗಳು ಬಂದಿವೆ.

ಪಶುಗಳ ಜತೆಗೆ ಇಲ್ಲಿ ಫಲಪುಷ್ಪ, ಆಹಾರಧಾನ್ಯ ತಳಿ, ಕೃಷಿ ಪರಿಕರ, ಯಂತ್ರೋಪಕರಣಗಳ ಪ್ರದರ್ಶನವೂ ಇದೆ. ಸರ್ಕಾರದ ವಿವಿಧ ಯೋಜನೆಗಳ ಕುರಿತು ಜನಜಾಗೃತಿ ಮೂಡಿಸಲು 22 ಇಲಾಖೆಗಳ ಮಳಿಗೆಗಳನ್ನು ಹಾಕಲಾಗಿದೆ. ವಾಣಿಜ್ಯ ಮಳಿಗೆಗಳು ಕೂಡ ಇವೆ.

ರಾಜ್ಯದ ವಿವಿಧ ಜಿಲ್ಲೆಗಳ ರೈತರು ಜಾನುವಾರುಗಳನ್ನು ತಂದು ಪ್ರದರ್ಶನಕ್ಕೆ ಇಟ್ಟಿದ್ದಾರೆ. ರೈತರು ಹಾಗೂ ಸಾರ್ವಜನಿಕರು ವಿವಿಧ ತಳಿಗಳ ಜಾನುವಾರು, ಮತ್ಸ್ಯ ಹಾಗೂ ಕೋಳಿಗಳನ್ನು ಕುತೂಹಲದಿಂದ ವೀಕ್ಷಿಸುತ್ತಿದ್ದಾರೆ.

ಜಾನುವಾರು ಸಾಕಣೆಯಲ್ಲಿ ಆಸಕ್ತಿ ಹೊಂದಿರುವ ರೈತರು ಜಾನುವಾರು ತಳಿ ವೈಶಿಷ್ಟ್ಯವನ್ನು ಕೇಳಿ ತಿಳಿದುಕೊಳ್ಳುತ್ತಿದ್ದಾರೆ. ಮಾರಾಟ ವ್ಯವಸ್ಥೆ ಸಹ ಇರುವ ಕಾರಣ ಅನೇಕರು ಗಿಳಿ, ಕೋಳಿ ಮೊದಲಾದವುಗಳನ್ನು ಕೊಂಡುಕೊಳ್ಳುತ್ತಿದ್ದಾರೆ. ಮಕ್ಕಳ ಸಾಮಾನ್ಯ ಜ್ಞಾನ ವೃದ್ಧಿಗೆ ಪೂರಕವಾಗಿ ಅನೇಕ ಶಾಲಾ ಕಾಲೇಜಿನವರು ವಿದ್ಯಾರ್ಥಿಗಳನ್ನು ಮೇಳಕ್ಕೆ ಕರೆದುಕೊಂಡು ಬಂದಿದ್ದರು.

ಮೇಳದಲ್ಲಿ ಜಾನುವಾರುಗಳಿಗೆ ಪಶು ಖಾದ್ಯ, ಹಸಿ ಮೇವು, ಒಣಮೇವು, ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ರೈತರಿಗೂ ಉಚಿತ ಊಟ ಇದೆ. ಮೊಬೈಲ್ ಶೌಚಾಲಯದ ವ್ಯವಸ್ಥೆ ಮಾಡಲಾಗಿದೆ.

ಪಶುಗಳ ಚಿಕಿತ್ಸೆಗೆ ವೈದ್ಯರ ತಂಡವನ್ನು ನಿಯೋಜಿಸಲಾಗಿದೆ. ತುರ್ತು ಸಂದರ್ಭಗಳಲ್ಲಿ ನೆರವಾಗಲು ಆಂಬುಲೆನ್ಸ್, ಅಗ್ನಿಶಾಮಕದ ದಳದ ವಾಹನಗಳನ್ನು ಸ್ಥಳದಲ್ಲಿ ಇರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT