ಗುರುವಾರ , ಮೇ 19, 2022
21 °C

ಅಬ್ದುಲ್ ಸುಭಾನ್‍ಗೆ ವರ್ಷದ ವ್ಯಕ್ತಿತ್ವ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಜಿಲ್ಲೆಯ ಅಬ್ದುಲ್ ಸುಭಾನ್ ಸೇಠ್ ಅವರಿಗೆ ದೇಶದ ಮುಂಚೂಣಿ 100 ಪ್ರಭಾವಶಾಲಿ ಬ್ರ್ಯಾಂಡ್ ಕೌನ್ಸಿಲ್ ರೇಟಿಂಗ್‍ಗಳ ವರ್ಷದ ವ್ಯಕ್ತಿತ್ವ ಪ್ರಶಸ್ತಿ ದೊರೆತಿದೆ.

ಅಂತರರಾಷ್ಟ್ರೀಯ ರೇಟಿಂಗ್, ಶ್ರೇಯಾಂಕ ಹಾಗೂ ಸಂಶೋಧನೆ ಆಧರಿಸಿ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಮುಂಬೈನಲ್ಲಿ ನಡೆದ ಸಮಾರಂಭದಲ್ಲಿ ಮಹಾರಾಷ್ಟ್ರದ ರಾಜ್ಯಪಾಲ ಭಗತ್‍ಸಿಂಗ್ ಕೋಶ್ಯಾರಿ ಹಾಗೂ ಪುದುಚೇರಿಯ ಮಾಜಿ ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ಅವರು ಪ್ರಶಸ್ತಿ ಪ್ರದಾನ ಮಾಡಿದರು.

ಸುಭಾನ್ ಸೇಠ್ ಬೀದರ್‌ನ ಕಾಂಗ್ರೆಸ್ ಹಿರಿಯ ಮುಖಂಡ ಅಬ್ದುಲ್ ಮನ್ನಾನ್ ಸೇಠ್ ಅವರ ಪುತ್ರರಾಗಿದ್ದಾರೆ. ಫಾಲ್ಕೊನ್ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರಾಗಿರುವ ಅವರು, ಬೆಂಗಳೂರಿನಲ್ಲಿ ಅನೇಕ ಕಾಲೇಜುಗಳನ್ನು ನಡೆಸುತ್ತಿದ್ದಾರೆ.

ಬಡ ಪ್ರತಿಭಾವಂತ ವಿದ್ಯಾರ್ಥಿಗಳ ವೃತ್ತಿಪರ ಕೋರ್ಸ್‍ಗಳ ಕನಸು ನನಸಾಗಿಸಲು ನೆರವಾಗುತ್ತಿದ್ದಾರೆ. ಗುಣಮಟ್ಟದ ಶಿಕ್ಷಣಕ್ಕೆ ಹೆಸರಾಗಿರುವ ಫಾಲ್ಕೊನ್ ಶಿಕ್ಷಣ ಸಂಸ್ಥೆ ಬೆಂಗಳೂರಿನಲ್ಲಿ ತನ್ನದೇ ಆದ ಛಾಪು ಮೂಡಿಸಿದೆ.
ಶಿಕ್ಷಣ ಕ್ಷೇತ್ರದಲ್ಲಿನ ಸಾಧನೆಗಾಗಿ ಅಬ್ದುಲ್ ಸುಭಾನ್ ಸೇಠ್ ಅವರಿಗೆ ಅನೇಕ ಪ್ರಶಸ್ತಿಗಳು ಸಂದಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.