ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೀದರ್‌ | ನೀಟ್‌ ಪರೀಕ್ಷೆ ಅಕ್ರಮ: ಸಿಬಿಐ ತನಿಖೆಗೆ ಆಗ್ರಹ

Published 11 ಜೂನ್ 2024, 15:38 IST
Last Updated 11 ಜೂನ್ 2024, 15:38 IST
ಅಕ್ಷರ ಗಾತ್ರ

ಬೀದರ್‌: ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮ, ಭ್ರಷ್ಟಾಚಾರದ ತನಿಖೆಯನ್ನು ಸಿಬಿಐನಿಂದ ನಡೆಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ (ಎಬಿವಿಪಿ) ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ನಗರದ ಡಾ.ಬಿ.ಆರ್‌. ಅಂಬೇಡ್ಕರ್‌ ವೃತ್ತದಿಂದ ಛತ್ರಪತಿ ಶಿವಾಜಿ ಮಹಾರಾಜರ ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿ ತನಕ ರ್‍ಯಾಲಿ ನಡೆಸಿದರು. ಜಿಲ್ಲಾಧಿಕಾರಿ ಕಚೇರಿ ಎದುರಿನ ಮುಖ್ಯರಸ್ತೆಯಲ್ಲಿ ಮಾನವ ಸರಪಳಿ ನಿರ್ಮಿಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಹಾಕಿದರು.

ನೀಟ್‌ ಪರೀಕ್ಷೆ ಹಾಗೂ ಮೌಲ್ಯಮಾಪನ ಸರಿಯಾಗಿ ನಡೆದಿಲ್ಲ. ಪರೀಕ್ಷೆ ಪ್ರಕ್ರಿಯೆ ಹಾಗೂ ಫಲಿತಾಂಶದ ಬಗ್ಗೆ ಅನೇಕ ಪ್ರಶ್ನೆಗಳು ಉದ್ಭವಿಸಿವೆ. ಪರೀಕ್ಷೆ ದಿನವೇ ದೇಶದ ಹಲವೆಡೆ ಅಕ್ರಮಗಳು ನಡೆದಿವೆ ಎಂದು ವರದಿಯಾಗಿದೆ. ಕೆಲವರು ಇದರಲ್ಲಿ ಸಿಕ್ಕಿಬಿದ್ದಿದ್ದಾರೆ. ಪ್ರಶ್ನೆ ಪತ್ರಿಕೆಗಳ ವಿತರಣೆಯಲ್ಲೂ ಅಕ್ರಮಗಳು ನಡೆದಿವೆ ಎಂದು ಎಬಿವಿಪಿ ಜಿಲ್ಲಾ ಸಂಚಾಲಕ ಶಶಿಕಾಂತ ಆರೋಪಿಸಿದರು.

ವೈದ್ಯಕೀಯ ಸಂಸ್ಥೆಗಳ ಪ್ರವೇಶಕ್ಕೆ ನಡೆಸುವ ಈ ಪರೀಕ್ಷೆಯ ಪಾರದರ್ಶಕತೆಯ ಬಗ್ಗೆ ವಿದ್ಯಾರ್ಥಿಗಳಿಗೆ ಅನುಮಾನ ಬಂದಿದೆ. ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯು ಪರೀಕ್ಷೆಯ ನಿರ್ವಹಣೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಲ್ಲ ಎಂಬುದು ಸ್ಪಷ್ಟವಾಗಿದೆ. ವಿದ್ಯಾರ್ಥಿಗಳಲ್ಲಿ ಮೂಡಿರುವ ಗೊಂದಲ ದೂರವಾಗಬೇಕಾದರೆ ಸಿಬಿಐನಿಂದ ತನಿಖೆ ನಡೆಸಿ ಸತ್ಯಾಂಶ ಹೊರಜಗತ್ತಿಗೆ ಗೊತ್ತಾಗಬೇಕು ಎಂದರು.

ಪ್ರಮುಖರಾದ ಸಾಯಿ ಬಾಸ್ಲೆ, ನಾಗರಾಜ್, ಪವನ್, ಸಾಯಿ ಕಿರಣ್, ಅಭಿಷೇಕ್, ಶಂಭು, ಆನಂದ್, ಮಹೇಶ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT