ಸೋಮವಾರ, ಮೇ 16, 2022
30 °C
ಕಮಲನಗರದಲ್ಲಿ ಬಸ್‍ಪಾಸ್ ಕೇಂದ್ರ ಆರಂಭಕ್ಕೆ ಒತ್ತಾಯ

ಬಸ್ ಸೌಕರ್ಯಕ್ಕಾಗಿ ಎಬಿವಿಪಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಜಿಲ್ಲೆಯ ಎಲ್ಲ ಗ್ರಾಮಗಳಿಗೂ ಬಸ್ ಸೌಕರ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಇಲ್ಲಿಯ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು.

ಜಿಲ್ಲೆಯಲ್ಲಿ ಈಗಾಗಲೇ ಶಾಲಾ ಕಾಲೇಜುಗಳನ್ನು ಆರಂಭಿಸಲಾಗಿದೆ. ಆದರೆ, ಬಹಳಷ್ಟು ಗ್ರಾಮಗಳಿಗೆ ಬಸ್‍ಗಳನ್ನು ಓಡಿಸದ ಕಾರಣ ವಿದ್ಯಾರ್ಥಿಗಳು ಪಾಠ, ಪ್ರವಚನಗಳಿಂದ ದೂರ ಉಳಿಯುವಂತಾಗಿದೆ ಎಂದು ದೂರಿದರು.

ಈಗಾಗಲೇ ಪರೀಕ್ಷೆ ದಿನಾಂಕಗಳನ್ನು ನಿಗದಿಪಡಿಸಲಾಗಿದೆ. ಆದರೆ, ಬಸ್ ಸೌಕರ್ಯ ಇಲ್ಲದ ಕಾರಣ ಬಡ ವಿದ್ಯಾರ್ಥಿಗಳು ಹಣ ಕೊಟ್ಟು ಖಾಸಗಿ ವಾಹನಗಳಲ್ಲಿ ಹೋಗಲಾಗದೆ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಹೇಳಿದರು.

ಎಲ್ಲ ಗ್ರಾಮಗಳಿಗೂ ಸಮಯಕ್ಕೆ ಸರಿಯಾಗಿ ಬಸ್ ಓಡಿಸಬೇಕು. ವಸತಿ ಬಸ್‍ಗಳನ್ನೂ ಆರಂಭಿಸಬೇಕು. ಕಮಲನಗರದಲ್ಲಿ ತಕ್ಷಣ ಬಸ್‍ಪಾಸ್ ವಿತರಣಾ ಕೇಂದ್ರ ಪ್ರಾರಂಭಿಸಬೇಕು ಎಂದು ಆಗ್ರಹಿಸಿದರು.

ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಚಂದ್ರಕಾಂತ ಫುಲೇಕರ್ ಮನವಿ ಪತ್ರ ಸ್ವೀಕರಿಸಿದರು. ಪರಿಷತ್ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ರೇವಣಸಿದ್ದ ಜಾಡರ್, ವಿಭಾಗ ಸಂಘಟನಾ ಕಾರ್ಯದರ್ಶಿ ಧನಂಜಯ, ರಾಜ್ಯ ಸಮಿತಿ ಸದಸ್ಯ ಅಮರ ಸುಲ್ತಾನಪುರೆ, ನಗರ ಘಟಕದ ಉಪಾಧ್ಯಕ್ಷ ನಾಗೇಶ ಬಿರಾದಾರ, ಕಾರ್ಯದರ್ಶಿ ಪ್ರದೀಪ ರೆಡ್ಡಿ, ಸಾಯಿ ಮೂಲಗೆ, ಲಿಂಗರಾಜ ಮರಕಲ್, ಅಭಿಷೇಕ, ವೀರೇಶ ರೇಕುಳಗಿ, ಶಿವಾನಂದ ಚಿಮಕೋಡ, ಸುನೀಲ್ ಉಪ್ಪೆ, ಕಿರಣಕುಮಾರ, ವಿಕಾಸ ಚೋರಮಲ್ಲೆ, ವೀರೇಶ ಹಡಪದ, ವೀರೇಂದ್ರ ಜಿಂದೆ, ಪರಶುರಾಮ ಶಿಂದೆ ಪಾಲ್ಗೊಂಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು