ಬೀದರ್: ವಿವಿಧ ಇಲಾಖೆಗಳಲ್ಲಿ ರಾಜ್ಯದಾದ್ಯಂತ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡದೇ ಯುವಜನಾಂಗದ ಭವಿಷ್ಯದೊಂದಿಗೆ ಚೆಲ್ಲಾಟವಾಡುತ್ತಿರುವ ರಾಜ್ಯ ಸರ್ಕಾರದ ಧೋರಣೆ ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ನಗರದ ಬಸವೇಶ್ವರ ವೃತ್ತದಿಂದ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ವರೆಗೆ ರ್ಯಾಲಿ ನಡೆಸಿ, ಬಳಿಕ ಮುಖ್ಯಮಂತ್ರಿಯವರ ಹೆಸರಿಗೆ ಬರೆದ ಮನವಿ ಪತ್ರ ಸಲ್ಲಿಸಿದರು.

‘ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳ ನೇಮಕಾತಿ ವಿಷಯದಲ್ಲಿ ಸರ್ಕಾರ ವಿಫಲವಾಗಿದೆ. ಒಟ್ಟು 43 ಇಲಾಖೆಗಳಲ್ಲಿನ ಸುಮಾರು 2,84,881 ಹುದ್ದೆಗಳು ಖಾಲಿ ಇದ್ದರೂ ಕಳೆದ ಮೂರು ವರ್ಷಗಳಿಂದ ನೇಮಕಾತಿ ಪ್ರಕ್ರಿಯೆ ಆರಂಭವಾಗಿಲ್ಲ. ಲಕ್ಷಾಂತರ ಅಭ್ಯರ್ಥಿಗಳು ಹಲವು ವರ್ಷಗಳಿಂದ ತರಬೇತಿ ಪಡೆದು ಸರ್ಕಾರಿ ಸೇವೆಗೆ ಸಿದ್ಧರಾಗಿದ್ದರೂ ಅವರ ವಯೋಮಿತಿ ಮೀರುತ್ತಿರುವುದು ದೊಡ್ಡ ಸಮಸ್ಯೆಯಾಗಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

‘ಶಿಕ್ಷಣ ಕ್ಷೇತ್ರದಲ್ಲಿಯೂ ಸಮಸ್ಯೆಗಳು ಗಂಭೀರವಾಗಿವೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯಲ್ಲಿ ಸುಮಾರು 79,694 ಹುದ್ದೆಗಳು ಹಾಗೂ ಉನ್ನತ ಶಿಕ್ಷಣ ಇಲಾಖೆಯಲ್ಲಿ 13,599 ಹುದ್ದೆಗಳು ಖಾಲಿ ಇರುವುದರಿಂದ ಶಿಕ್ಷಣದ ಗುಣಮಟ್ಟ ಕುಸಿದಿದೆ. ಸರಿಯಾಗಿ ತರಗತಿಗಳು ನಡೆಯದೇ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದೆ’ ಎಂದು ಹೇಳಿದರು.

‘ರಾಜ್ಯದಲ್ಲಿ ವಿಶ್ವವಿದ್ಯಾಲಯಗಳ ಸ್ಥಿತಿಗತಿಯೂ ಶೋಚನೀಯವಾಗಿದೆ. ಸರ್ಕಾರದಿಂದ ಸಮರ್ಪಕ ಅನುದಾನ ಸಿಗದ ಹಿನ್ನೆಲೆಯಲ್ಲಿ ವಿಶ್ವವಿದ್ಯಾಲಯಗಳು ವಿದ್ಯಾರ್ಥಿಗಳ ಶುಲ್ಕದ ಮೇಲೆ ಅವಲಂಬಿತವಾಗಿದ್ದು, ಇದರಿಂದ ವಿದ್ಯಾರ್ಥಿಗಳ ಮೇಲೆ ಹೆಚ್ಚುವರಿ ಆರ್ಥಿಕ ಭಾರ ಬೀಳುತ್ತಿದೆ. ಅಂಕಪಟ್ಟಿ, ಫಲಿತಾಂಶ ಸೇರಿದಂತೆ ಅನೇಕ ಆಡಳಿತಾತ್ಮಕ ಸಮಸ್ಯೆಗಳು ಉಂಟಾಗುತ್ತಿವೆ’ ಎಂದು ಆರೋಪಿಸಿದರು.

‘ವಿದ್ಯಾರ್ಥಿ ವೇತನವೂ ಸರಿಯಾದ ಸಮಯಕ್ಕೆ ದೊರೆಯದೇ ಬಡ ವಿದ್ಯಾರ್ಥಿಗಳು ಸಂಕಷ್ಟ ಅನುಭವಿಸುತ್ತಿದ್ದಾರೆ. ಈ ಹಿನ್ನೆಲೆ ಸರ್ಕಾರ ತಕ್ಷಣ ಕ್ರಮ ಕೈಗೊಂಡು ವಿದ್ಯಾರ್ಥಿಗಳ ಸಮಸ್ಯೆಗಳನ್ನು ಪರಿಹರಿಸಬೇಕು’ ಎಂದು ಆಗ್ರಹಿಸಿದರು.

ಎಬಿವಿಪಿ ನಗರ ಸಂಘಟನಾ ಕಾರ್ಯದರ್ಶಿ ಚಂದ್ರಶೇಖರ್ ಗೂಡಸಿ, ನಗರ ಸಹ ಕಾರ್ಯದರ್ಶಿ ಅಭಿಷೇಕ್, ಪ್ರಾಂತ ಕಾರ್ಯ ಸಮಿತಿ ಸದಸ್ಯೆ ಪವನ್ ಕುಂಬಾರ, ಪ್ರಾಂತ ಕಾರ್ಯಕಾರಿಣಿ ಸದಸ್ಯೆ ಅಂಬಿಕಾ ಕುಂಬಾರ, ಸಾಮಾಜಿಕ ಜಾಲತಾಣ ಪ್ರಮುಖ ಲಿಂಗದೇವ ಗುತ್ತಿ, ಮಲ್ಲಿಕಾರ್ಜುನ, ಪ್ರಶಾಂತ್, ಪಂಡಿತ್ ಮತ್ತಿತರರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.