ಬೀದರ್: ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವ ವಿದ್ಯಾಲಯದ ಕುಲಪತಿ ಹುದ್ದೆಯನ್ನು ರಾಜ್ಯಪಾಲರ ಬದಲು ಮುಖ್ಯಮಂತ್ರಿಗಳಿಗೆ ನೀಡುತ್ತಿರುವ ಸರ್ಕಾರದ ನಿರ್ಧಾರವನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.

ಬಳಿಕ ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು. ವಿಶ್ವವಿದ್ಯಾಲಯಗಳು ಶಿಕ್ಷಣದ ಭಾಗವಾಗಬೇಕು ಹೊರತು ರಾಜಕಾರಣದ ಕೇಂದ್ರವಾಗಬಾರದು ಎಂಬ ಉದ್ದೇಶದಿಂದ ಸಾಂವಿಧಾನಿಕ ಹುದ್ದೆಯಾದ ರಾಜ್ಯಪಾಲರಿಗೆ ವಿಶ್ವವಿದ್ಯಾಲಯಗಳ ಕುಲಪತಿ ಹುದ್ದೆ ರಾಜ್ಯಪಾಲರ ಬಳಿ ಇರುತ್ತದೆ. ಆದರೆ, ರಾಜ್ಯ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿಗೆ ವಹಿಸುವ ತೀರ್ಮಾನ ಕೈಗೊಂಡಿರುವುದು ಸರಿಯಲ್ಲ ಎಂದು ತಿಳಿಸಿದರು.

ರಾಜ್ಯ ಸರ್ಕಾರ ವಿಶ್ವವಿದ್ಯಾಲಯಗಳಿಗೆ ಅಗತ್ಯ ಅನುದಾನ ಕೊಟ್ಟು ಅವುಗಳನ್ನು ಅಭಿವೃದ್ಧಿ ಪಡಿಸಬೇಕಿತ್ತು. ಆದರೆ, ಸಂವಿಧಾನಿಕ ಹುದ್ದೆಗಳ ವಿರುದ್ಧ ನಿರ್ಣಯ ಕೈಗೊಂಡಿರುವುದು ಸರಿಯಲ್ಲ. ಇದರಿಂದ ಉನ್ನತ ಶಿಕ್ಷಣದಲ್ಲಿ ರಾಜಕೀಯ ಬೆರೆಸಿದಂತಾಗುತ್ತದೆ. ಕೂಡಲೇ ತನ್ನ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಒತ್ತಾಯಿಸಿದರು.

ಎಬಿವಿಪಿ ನಗರ ಘಟಕದ ಕಾರ್ಯದರ್ಶಿ ಆನಂದ್ ಅಮನಾಬಾದೆ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಹೇಮಂತ, ಪವನ್ ಕುಂಬಾರ್, ನಾಗರಾಜ ಪವನ್ ಪಾಂಚಾಳ, ಲಿಂಗದೇವ ಗುತ್ತಿ , ಅತೀಶ್, ಚಾಂದಪಾಷ, ಪ್ರಾರ್ಥನಾ, ಮಮತಾ, ಅಂಬಿಕಾ, ಸೀತಾ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.