ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್: ಪೂರ್ಣ ಪ್ರಮಾಣದ ತರಗತಿ ನಡೆಸಲು ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

Last Updated 6 ಜನವರಿ 2022, 16:18 IST
ಅಕ್ಷರ ಗಾತ್ರ

ಬೀದರ್: ಪ್ರಥಮ ದರ್ಜೆ ಕಾಲೇಜಗಳಲ್ಲಿ ಪೂರ್ಣ ಪ್ರಮಾಣದ ತರಗತಿ ನಡೆಸಬೇಕು ಹಾಗೂ ಖಾಲಿ ಇರುವ ಹುದ್ದೆಗಳಿಗೆ ಅತಿಥಿ ಉಪನ್ಯಾಸಕರ ನೇಮಕ ಮಾಡಬೇಕು ಎಂದು ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಜಿಲ್ಲಾ ಘಟಕದ ಕಾರ್ಯಕರ್ತರು ಇಲ್ಲಿಯ ನೌಬಾದ್‌ನಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಪ್ರತಿಭಟನೆ ನಡೆಸಿದರು.

ಸರ್ಕಾರಿ ಪದವಿ ಹಾಗೂ ಸ್ನಾತಕೋತ್ತರ ಪದವಿ ಕಾಲೇಜಿನಲ್ಲಿ ತರಗತಿಗಳು ಸರಿಯಾಗಿ ನಡೆಯುತ್ತಿಲ್ಲ. ಕೋವಿಡ್‌ ಕಾರಣ ವಿದ್ಯಾರ್ಥಿಗಳು ತೊಂದರೆ ಎದುರಿಸಬೇಕಾಗಿದೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಪದವಿ, ಸ್ನಾತಕೋತ್ತರ ತರಗತಿಗಳಿಗೆ ವಿದ್ಯಾರ್ಥಿಗಳು ಉತ್ಸಾಹದಿಂದ ಬರುತ್ತಿದ್ದಾರೆ. ಆದರೆ ತರಗತಿಗಳು ಪೂರ್ಣ ಪ್ರಮಾಣದಲ್ಲಿ ನಡೆಯುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರ ಒಂದು ತಿಂಗಳು ತಡ ಮಾಡಿ ಶೇಕಡ 80ರಷ್ಟು ಅತಿಥಿ ಉಪನ್ಯಾಸಕರ ನೇಮಕ ಮಾಡಿದೆ. ಅತಿಥಿ ಉಪನ್ಯಾಸಕರು ತರಗತಿ ಬಹಿಷ್ಕರಿರುವ ಕಾರಣ ವಿದ್ಯಾರ್ಥಿಗಳು ಪಾಠ ಪ್ರವಚನದಿಂದ ದೂರ ಉಳಿಯಬೇಕಾಗಿದೆ ಎಂದು ಹೇಳಿದರು.

ಪ್ರಸ್ತುತ ಶೇಕಡ 80ರಷ್ಟು ಶಿಕ್ಷಕರನ್ನು ಮಾತ್ರ ನಿಯೋಜಿಸಲಾಗಿದೆ. ಉಳಿದ ಶೇಕಡ 20ರಷ್ಟು ಅತಿಥಿ ಉಪನ್ಯಾಸಕರನ್ನು ತಕ್ಷಣ ನೇಮಕ ಮಾಡಿಕೊಂಡು ವಿದ್ಯಾರ್ಥಿಗಳ ಸಮಸ್ಯೆ ನಿವಾರಿಸಬೇಕು ಎಂದು ಎಬಿವಿಪಿ ರಾಷ್ಟೀಯ ಕಾರ್ಯಕಾರಣಿ ಸದಸ್ಯ ರೇವಣಸಿದ್ದ ಜಾಡರ್ ಒತ್ತಾಯಿಸಿದರು.

ಎಬಿವಿಪಿ ಜಿಲ್ಲಾ ಪ್ರಮುಖರಾದ ಯೋಗೇಶ ಎಂ.ಬಿ. ನಗರ ಕಾರ್ಯದರ್ಶಿ ಪ್ರದೀಪ ರೆಡ್ಡಿ. ಅರವಿಂದ ಸುಂದಳಕರ್. ಜಿಲ್ಲಾ ಹಾಸ್ಟೆಲ್ ಪ್ರಮುಖ ರಮೇಶ ಮಿರಜಾಪೂರೆ. ಅಂಬ್ರೇಶ ಬಿರಾದರ. ವಿಶಾಲ ಅತಿವಾಳ. ಉಷಾ ಕುಂಬಾರ. ಭಾರತಿ. ಸಂಜಯ ಪಾಟೀಲ, ಸೂರ್ಯಕಾಂತ ಕೋರಿ. ಶಿವಕಾಂತ ಪಾಟೀಲ, ಅತಿಥ ಉಪನ್ಯಾಸಕ ಡಾಂಗೆ ಎಂ. ಮಂಜುನಾಥ ಮಠಪತಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT