ಬುಧವಾರ, ಸೆಪ್ಟೆಂಬರ್ 29, 2021
19 °C

ಬಸವಕಲ್ಯಾಣ: ಅಪಘಾತ; ಇಬ್ಬರ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಸವಕಲ್ಯಾಣ: ಸಸ್ತಾಪುರ ಹತ್ತಿರದ ರಾಷ್ಟ್ರೀಯ ‌ಹೆದ್ದಾರಿಯಲ್ಲಿನ ಖಾಂಡ ಸಾರಿ‌ ಕಾರ್ಖಾನೆ ಹತ್ತಿರ ಭಾನುವಾರ ವಾಹನ ಅಪಘಾತ ಸಂಭವಿಸಿ ಇಬ್ಬರು ಮೃತಪಟ್ಟಿದ್ದಾರೆ.

ತಾಲ್ಲೂಕಿನ ತಳಭೋಗದ ಗೋವಿಂದ ಸಸಾನೆ (40) ಹಾಗೂ ಸಸ್ತಾಪುರದ ಕಲಾವತಿ ವಿಜಯಕುಮಾರ (41) ಮೃತರು. ತಳಭೋಗದಿಂದ ದ್ವಿಚಕ್ರ ವಾಹನದಲ್ಲಿ ಸಸ್ತಾಪುರಕ್ಕೆ‌ ಹೋಗುವಾಗ ಅಪರಿಚಿತ ಕಾರ್ ಡಿಕ್ಕಿ ಹೊಡೆದಿದ್ದರಿಂದ ಗಂಭೀರವಾಗಿ ಗಾಯಗೊಂಡಿದ್ದ ಇವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೊಬ್ಬ ಮಹಿಳೆ ಮಂಜುಳಾಬಾಯಿ ಗಾಯಗೊಂಡಿದ್ದು ಇವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಇಲ್ಲಿನ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.