ಬೀದರ್: ‘ಬಕ್ರೀದ್ ಹಬ್ಬವನ್ನು ಎಲ್ಲರೂ ಶಾಂತಿಯುತವಾಗಿ ಆಚರಿಸಬೇಕು. ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್, ದ್ವೇಷ ಭಾಷಣ ಮಾಡಿದರೆ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದು ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ ಪೂಜಾರಿ ಎಚ್ಚರಿಕೆ ನೀಡಿದರು.

ಬಕ್ರೀದ್ ಹಬ್ಬದ ಅಂಗವಾಗಿ ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಏರ್ಪಡಿಸಿದ್ದ ಸಭೆಯಲ್ಲಿ ಮಾತನಾಡಿದರು.

ಯಾರು ಕೂಡ ವಿವಾದಾತ್ಮಕ ಅಂಶಗಳಿರುವ ಪೋಸ್ಟ್, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹಾಕಬಾರರು. ಗೋವುಗಳ ಹತ್ಯೆ, ಅಕ್ರಮ ಸಾಗಾಟ ನಿಷೇಧಿಸಲಾಗಿದೆ. ಗೋಹತ್ಯೆ ನಿಷೇಧ ಕಾಯ್ದೆ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.

ಜಿಲ್ಲೆಯ ಮುಸ್ಲಿಂ ಹಾಗೂ ಹಿಂದೂ ಸಮುದಾಯದವರು ಒಗ್ಗಟ್ಟು ಪ್ರದರ್ಶಿಸಬೇಕು. ಯಾವುದೇ ರೀತಿಯ ಅಹಿತಕರ ಘಟನೆ ಆಗದಂತೆ ಬಕ್ರೀದ್ ಹಬ್ಬ ಆಚರಿಸಬೇಕೆಂದು ಸಲಹೆ ಮಾಡಿದರು.

ಡಿವೈಎಸ್ಪಿಗಳಾದ ಶಿವನಗೌಡ ಪಾಟೀಲ, ಶಿವಾನಂದ ಪವಾಡಶೆಟ್ಟಿ, ಜೆ.ಎಸ್. ನ್ಯಾಮೇಗೌಡ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.