ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರವಾಸೋದ್ಯಮ ಅಭಿವೃದ್ಧಿಗೆ ಕ್ರಮ: ವಿಜಯಸಿಂಗ್ ಪ್ರಶ್ನೆಗೆ ಆನಂದ ಸಿಂಗ್ ಉತ್ತರ

Last Updated 22 ಸೆಪ್ಟೆಂಬರ್ 2021, 15:47 IST
ಅಕ್ಷರ ಗಾತ್ರ

ಬೀದರ್: ಬೀದರ್ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಆದ್ಯತೆ ಮೇರೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಆನಂದ ಸಿಂಗ್ ಹೇಳಿದ್ದಾರೆ.

ವಿಧಾನ ಪರಿಷತ್ ಸದಸ್ಯ ವಿಜಯಸಿಂಗ್ ಅವರ ಪ್ರಶ್ನೆಗೆ ನೀಡಿರುವ ಲಿಖಿತ ಉತ್ತರದಲ್ಲಿ ಅವರು ಈ ಮಾಹಿತಿ ನೀಡಿದ್ದಾರೆ.

ಪ್ರವಾಸಿ ತಾಣಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಚಿವರು, ಶಾಸಕರು, ಜಿಲ್ಲಾಧಿಕಾರಿ, ಸಂಘ ಸಂಸ್ಥೆಗಳು ಹಾಗೂ ಇತರ ಜನಪ್ರತಿನಿಧಿಗಳಿಂದ ಸ್ವೀಕೃತವಾಗುವ ಪ್ರಸ್ತಾವಗಳನ್ನು ಅನುದಾನ ಲಭ್ಯತೆಗೆ ಅನುಗುಣವಾಗಿ ಪರಿಶೀಲಿಸಲಾಗುವುದು ಎಂದು ತಿಳಿಸಿದ್ದಾರೆ.

ಕರ್ನಾಟಕ ಪ್ರವಾಸೋದ್ಯಮ ನೀತಿ 2020-25 ರಡಿ ಗುರುತಿಸಲಾದ ಪ್ರವಾಸಿ ತಾಣಗಳಲ್ಲಿ ಬೀದರ್‌ನ ಪಾಪನಾಶ ದೇವಸ್ಥಾನ, ಚೌಖಂಡಿ, ಅಷ್ಟೂರಿನ ಬಹಮನಿ ಸುಲ್ತಾನರ ಗೊಮ್ಮಟಗಳು, ಭೂ ಕಾಲುವೆ, ಹುಮನಾಬಾದ್ ತಾಲ್ಲೂಕಿನ ಜಲಸಂಗಿ, ಬಸವಕಲ್ಯಾಣದ ಅನುಭವ ಮಂಟಪ, ನಾರಾಯಣಪುರ, ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಕೊಟೆ, ಕಾರಂಜಾ ಜಲಾಶಯಗಳು ಸೇರಿವೆ ಎಂದು ಹೇಳಿದ್ದಾರೆ.

ಪ್ರವಾಸೋದ್ಯಮ ಇಲಾಖೆಯಿಂದ ಜಿಲ್ಲೆಯ ಪ್ರವಾಸಿ ತಾಣಗಳ ಬಳಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ 2008-09 ರಿಂದ 2018-19 ರ ವರೆಗೆ ₹ 132.16 ಕೋಟಿ ಅನುದಾನ ಒದಗಿಸಲಾಗಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT