ಬುಧವಾರ, 17 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹುಮನಾಬಾದ್ | ದಾಬಾಗಳಲ್ಲಿ ಸಾರಾಯಿ ಮಾರಾಟ ಮಾಡಿದರೆ ಕ್ರಮ: ಪಿಎಸ್ಐ ಅಯ್ಯಪ್ಪ

Published 23 ಜೂನ್ 2024, 15:52 IST
Last Updated 23 ಜೂನ್ 2024, 15:52 IST
ಅಕ್ಷರ ಗಾತ್ರ

ಹುಮನಾಬಾದ್: ವಾಹನ ಅಪಘಾತಗಳು ಹೆಚ್ಚಾಗುತ್ತಿವೆ. ಹೀಗಾಗಿ ದಾಬಾಗಳಲ್ಲಿ ಸಾರಾಯಿ ಮಾರಾಟ ಮಾಡಬಾರದು ಎಂದು ಪಿಎಸ್ಐ ಅಯ್ಯಪ್ಪ ತಿಳಿಸಿದರು.

ತಾಲ್ಲೂಕಿನ ಹಳ್ಳಿಖೇಡ್ ಬಿ. ಪೊಲೀಸ್ ಠಾಣೆಯಲ್ಲಿ ಭಾನುವಾರ ದಾಬಾಗಳ ಮಾಲೀಕರ ಸಭೆಯಲ್ಲಿ ಅವರು ಮಾತನಾಡಿದರು.

‘ದಾಬಾಗಳಲ್ಲಿ ಸಾರಾಯಿ ಮಾರಾಟ ನಿಷೇಧವಿದ್ದರೂ ಮಾರಾಟ ಮಾಡಲಾಗುತ್ತಿದೆ ಎಂಬ ದೂರುಗಳು ಬಂದಿವೆ. ಹೀಗಾಗಿ ಕಾನೂನು ಬಾಹಿರ ಚಟುವಟಿಕೆ ಮಾಡಬಾರದು.‌ ಒಂದು ವೇಳೆ ದಾಬಾಗಳಲ್ಲಿ ಸಾರಾಯಿ ಮಾರಾಟ ಕಂಡುಬಂದರೆ ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಸಿದರು.

ಹಳ್ಳಿಖೆಡ್ ಬಿ. ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಎಲ್ಲ ದಾಬಾಗಳ ಮಾಲೀಕರು ಸಿಸಿ ಕ್ಯಾಮೆರಾ ಅಳವಡಿಕೆ ಮಾಡಬೇಕು. ರಸ್ತೆ ನಿಯಮ ಪಾಲಿಸಿ, ನಿಗದಿತ ಸಮಯಕ್ಕೆ ದಾಬಾ ಮುಚ್ಚಬೇಕು’ ಎಂದು ಸೂಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT