ಸೋಮವಾರ, ಏಪ್ರಿಲ್ 12, 2021
31 °C
‘ದುಡಿಯೋಣ ಬಾ’ ಅಭಿಯಾನಕ್ಕೆ ಚಾಲನೆ

ಬೇಸಿಗೆಯಲ್ಲಿ ವಲಸೆ ತಪ್ಪಿಸಲು ಕ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಟಗುಪ್ಪ: ‘ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಡೆಯುವುದಕ್ಕಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯು ಮಾರ್ಚ್‌ 15ರಿಂದ ಜೂನ್‌ 15ರ ವರೆಗೆ ಮೂರು ತಿಂಗಳ ಅವಧಿಗೆ, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ‘ದುಡಿಯೋಣ ಬಾ’ ಎಂಬ ಅಭಿಯಾನ ಹಮ್ಮಿಕೊಳ್ಳಲಾಗಿದೆ’ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶಂಕರ್‌ ಕನಕ್‌ ತಿಳಿಸಿದರು.

ತಾಲ್ಲೂಕಿನ ಬೆಳಕೇರಾ ಗ್ರಾಮದಲ್ಲಿ ಬುಧವಾರ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.

‘ಬೇಸಿಗೆಯಲ್ಲಿ ನಿರಂತರವಾಗಿ ಕೆಲಸ ಒದಗಿಸುವುದು, ದುರ್ಬಲ ಕುಟುಂಬಗಳನ್ನು ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಮಾಡುವುದು, ಗ್ರಾಮೀಣ ಜನರಿಗೆ ಉದ್ಯೋಗ ನೀಡುವ ಮೂಲಕ ಸ್ವಾವಲಂಬಿ ಬದುಕು ಸಾಗಿಸುವಂತೆ ಮಾಡುವುದು, ಕೆಲಸ ಕಾಮಗಾರಿ ಬೇಡಿಕೆ ಸಲ್ಲಿಸುವ ವಿಧಾನವನ್ನು ಸರಳಗೊಳಿಸುವುದು ಅಭಿಯಾನದ ಉದ್ದೇಶ’ ಎಂದರು.

ನರೇಗಾ ಯೋಜನೆ ಸಹಾಯಕ ನಿರ್ದೇಶಕ ಸೂರ್ಯಕಾಂತ ಬೀರಾದಾರ ಮಾತನಾಡಿ, ‘ಬೇಸಿಗೆ ಕಾಲದ ಮೂರು ತಿಂಗಳು ಗ್ರಾಮೀಣ ಭಾಗದ ನಾಗರಿಕರು ಮನೆಯಲ್ಲಿ ಕಾಲ ಕಳೆಯುವ ಬದಲು ದುಡಿಯೋಣ ಬಾ ಯೋಜನೆ ಅಡಿಯಲ್ಲಿ ಪಾಲ್ಗೊಂಡು ಶ್ರಮವಹಿಸಿ ದುಡಿದು ಹಣ ಸಂಪಾದನೆ ಮಾಡಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಯೋಜನೆಯ ಯಶಸ್ಸಿಗೆ ಕಾರಣರಾಗಬೇಕು’ ಎಂದರು.

ಚೆಕ್‌ ಡ್ಯಾಮ್‌ ಹೂಳೆತ್ತುವ 168 ಕಾರ್ಮಿಕರಿಗೆ 20 ಕೂಲಿ ದಿನಗಳ ಉದ್ಯೋಗ ಚೀಟಿ ವಿತರಿಸಲಾಯಿತು.

ಅಭಿವೃದ್ಧಿ ಅಧಿಕಾರಿ ಸುಶಾಂತ್, ಐಇಸಿ ಸಂಯೋಜಕ ವಿಶ್ವನಾಥ ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.