ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಲಾ ಶೌಚಾಲಯ ಮುಚ್ಚಿದರೆ ಕ್ರಮ :ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಗೀತಾ ಚಿದ್ರಿ ಎಚ್ಚರ

ಬಸವಕಲ್ಯಾಣ: ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಗೀತಾ ಚಿದ್ರಿ ಎಚ್ಚರಿಕೆ
Last Updated 25 ಡಿಸೆಂಬರ್ 2019, 12:57 IST
ಅಕ್ಷರ ಗಾತ್ರ

ಬಸವಕಲ್ಯಾಣ: `ಎಲ್ಲ ಶಾಲೆಗಳಲ್ಲಿ ಶೌಚಾಲಯಗಳಿವೆ. ಆದರೆ ಕೆಲವೆಡೆ ನೀರಿನ ಸೌಲಭ್ಯ ಇಲ್ಲದ್ದರಿಂದ ಮುಚ್ಚಿರುವ ತಿಳಿದು ಬಂದಿದೆ. ಇನ್ನು ಮುಂದೆ ಹೀಗಾಗದಂತೆ ನೋಡಿಕೊಳ್ಳಬೇಕು’ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಗೀತಾ ಪಂಡಿತರಾವ್ ಚಿದ್ರಿ ಎಚ್ಚರಿಕೆ ನೀಡಿದರು.

ಇಲ್ಲಿನ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

‘ಶಾಲೆಗಳಲ್ಲಿ ಕೊಳವೆ ಬಾವಿ ಕೊರೆಸಲಾಗುತ್ತಿದೆ. ಆದರೂ ಕೆಲವೆಡೆ ನೀರಿನ ಕೊರತೆ ಇರುವ ನೆಪ ಏಕೆ ಹೇಳಲಾಗುತ್ತಿದೆ. ಕ್ಷೇತ್ರ ಶಿಕ್ಷಣಾಧಿಕಾರಿಗಳು ಮೊದಲೇ ಈ ಬಗ್ಗೆ ಶಾಸಕರಿಗೆ ಹಾಗೂ ಇತರರಿಗೆ ಮಾಹಿತಿ ಏಕೆ ನೀಡಿಲ್ಲ. ಶೌಚಾಲಯಗಳು ಮುಚ್ಚಿದ್ದರೆ ಬಾಲಕಿಯರ ಗತಿ ಏನು? ಸ್ವಚ್ಛಭಾರತ ಯೋಜನೆ ಜಾರಿಗೊಳಿಸಲು ಹೊರಟಾಗ ಶಾಲೆಗಳಲ್ಲಿ ಅಸ್ವಚ್ಛತೆ ಇರುವುದು ಸರಿಯೇ? ಇದಲ್ಲದೆ ಶಾಲೆಗಳಲ್ಲಿನ ಬಿಸಿಯೂಟದಲ್ಲಿ ಅತ್ಯಲ್ಪ ತರಕಾರಿ ಬಳಕೆ ಮಾಡಿರುವ ಬಗ್ಗೆ ಗೊತ್ತಾದರೆ ಕ್ರಮ ತೆಗೆದು ಕೊಳ್ಳಲಾಗುವುದು ಎಂದು ಎಚ್ಚ್ರಿಸಿದರು.

‘ಸಮಾಜಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿ ವಸತಿ ನಿಲಯಗಳಲ್ಲಿ ಸರಿಯಾಗಿ ಊಟ ಸಿಗುತ್ತಿಲ್ಲ. ಗ್ರಂಥಾಲಯಗಳಲ್ಲಿ ಪುಸ್ತಕಗಳನ್ನು ನೀಡುವುದಿಲ್ಲ ಎಂದು ಕೆಲ ವಸತಿ ನಿಲಯಗಳಿಗೆ ಭೇಟಿ ನೀಡಿದಾಗ ವಿದ್ಯಾರ್ಥಿಗಳು ದೂರಿದ್ದಾರೆ. ಆ ರೀತಿ ಆಗದಂತೆ ಸಂಬಂಧಿಸಿದವರು ಕ್ರಮ ತೆಗದುಕೊಳ್ಳಬೇಕು. ಅಧಿಕಾರಿಗಳು ಪರಿಶೀಲಿಸಬೇಕು ಎಂದರು.

ಶಾಸಕ ಬಿ.ನಾರಾಯಣರಾವ್ ಮಾತನಾಡಿ, `ಕೊಹಿನೂರ ಮೊರಾರ್ಜಿ ದೇಸಾಯಿ ಶಾಲೆ ಹಾಗೂ ಬಟಗೇರಾ ಬಿಸಿಎಂ ವಿದ್ಯಾರ್ಥಿ ನಿಲಯದ ಹೊಸ ಕಟ್ಟಡಕ್ಕಾಗಿ ಪ್ರಸ್ತಾವ ಸಲ್ಲಿಸಬೇಕು. ಸಾರಿಗೆ ಅಧಿಕಾರಿಗಳು ವರ್ಷಕ್ಕೆ ನಿಗದಿಪಡಿಸಿದ ವಾಹನ ತೆರಿಗೆ ಸಂಗ್ರಹಿಸಬೇಕು. ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಹೆಚ್ಚಳಕ್ಕೆ ಶಿಕ್ಷಕರು ಪ್ರಯತ್ನಿಸಬೇಕು. ಕೊಹಿನೂರ ಬಹುಗ್ರಾಮ ನೀರು ಸರಬರಾಜು ಯೋಜನೆ ಕಾರ್ಯಗತಕ್ಕೆ ಸಂಬಂಧಿತರು ಪ್ರಯತ್ನಿಸಬೇಕು’ ಎಂದು ಸಲಹೆ ನೀಡಿದರು.

ಜಿಲ್ಲಾ ಪಂಚಾಯಿತಿ ಸದಸ್ಯರಾದ ಗುಂಡುರೆಡ್ಡಿ ಹಾಗೂ ಆನಂದ ಪಾಟೀಲ ಮಾತನಾಡಿ, `ಕೆಲ ವರ್ಷಗಳಿಂದ ಕಾಮಗಾರಿ ಪೂರ್ಣಗೊಳಿಸದ ಗುತ್ತಿಗೆದಾರರನ್ನು ಬ್ಲಾಕ್ ಲಿಸ್ಟ್ ನಲ್ಲಿ ಸೇರ್ಪಡೆ ಮಾಡಲು ಶಿಫಾರಸ್ಸು ಮಾಡಬೇಕು. ಕೆಲವೆಡೆ ಕಳಪೆ ಕಾಮಗಾರಿ ನಡೆದಿದೆ. ಈ ಬಗ್ಗೆ ಪರಿಶೀಲಿಸಿ ಕಠಿಣ ಕ್ರಮ ತೆಗೆದುಕೊಳ್ಳಬೇಕು’ ಎಂದು ಒತ್ತಾಯಿಸಿದರು.

ಸುಧೀರ ಕಾಡಾದಿ ಮಾತನಾಡಿ, `ಜಿಲ್ಲಾ ಪಂಚಾಯಿತಿ ಎಂಜಿನಿಯರಿಂಗ್ ವಿಭಾಗದಿಂದ 50 ಕಾಮಗಾರಿ ಪೂರ್ಣಗೊಳಿಸಿದ ಬಗ್ಗೆ ಸಭೆಯಲ್ಲಿ ಮಾಹಿತಿ ನೀಡಲಾಗಿದೆ’ ಎಂದರು.

ಸದಸ್ಯ ಅಣ್ಣಾರಾವ್ ರಾಠೋಡ ಮಾತನಾಡಿ, ನೀಲಕಂಠವಾಡಿಯಲ್ಲಿ ಸಿಸಿ ರಸ್ತೆಯ ಮಧ್ಯದಿಂದ ಪೈಪ್‌ಲೈನ್ ಮಾಡಿರುವ ಬಗ್ಗೆ ತನಿಖೆಯಾಗಲಿ ಎಂದು ಆಗ್ರಹಿಸಿದರು.‌

ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಯಶೋದಾ ನೀಲಕಂಠ ರಾಠೋಡ, ಇಒ ಮಡೋಳಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT