ಸಚಿವ ಪ್ರಭು ಚವಾಣ್‌ರಿಂದ ನಟ ಪುನೀತ್‍ಗೆ ಅವಮಾನ: ಅರವಿಂದಕುಮಾರ ಅರಳಿ ಆರೋಪ

ಬೀದರ್: ನಟ ಪುನೀತ್ ರಾಜಕುಮಾರ್ ನಿಧನದಿಂದ ರಾಜ್ಯ ಶೋಕ ಸಾಗರದಲ್ಲಿ ಮುಳುಗಿದ್ದಾಗ, ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಜಿಲ್ಲೆಯ ಚೊಂಡಿಮುಖೇಡ್ ಕಾರ್ಯಕ್ರಮದಲ್ಲಿ ಕುಣಿದು ಕುಪ್ಪಳಿಸಿ, ಸರ್ಕಾರ ಹಾಗೂ ರಾಜ್ಯದ ಜನ ತಲೆ ತಗ್ಗಿಸುವಂತೆ ಮಾಡಿದ್ದಾರೆ. ಪವರ್ ಸ್ಟಾರ್‌ಗೆ ಅವಮಾನಿಸಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ ಅರಳಿ ಆರೋಪಿಸಿದ್ದಾರೆ.
ಒಂದೆಡೆ ಸರ್ಕಾರವೇ ಪುನೀತ್ ಅವರಿಗೆ ಸಕಲ ಸರ್ಕಾರಿ ಗೌರವ ನೀಡಿದ್ದರೆ, ಮತ್ತೊಂದೆಡೆ ಸಚಿವರು ನಡೆದುಕೊಂಡ ರೀತಿ ದುಃಖ ಉಂಟು ಮಾಡಿದೆ ಎಂದು ಹೇಳಿದ್ದಾರೆ.
ಸಚಿವರು ಮಹಾರಾಷ್ಟ್ರದ ಸಂಬಂಧ ಹೊಂದಿದ್ದಾರೆ. ಅವರಿಗೂ ರಾಜ್ಯದ ನೆಲ, ಜಲ, ಭಾಷೆ ಹಾಗೂ ಜನರ ಗೌರವಕ್ಕೂ ಸಂಬಂಧ ಇಲ್ಲದಂತೆ ಕಾಣುತ್ತಿದೆ ಎಂದು ತಿಳಿಸಿದ್ದಾರೆ.
ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಶೇಖರ ಅವರು ಸಚಿವರಿಗೆ ಸಹಕರಿಸಿ ಹೆಜ್ಜೆ ಹಾಕಿದ್ದು ವಿಪರ್ಯಾಸ. ಮುಖ್ಯಮಂತ್ರಿ ಅವರು ಚವಾಣ್ ಅವರನ್ನು ಸಂಪುಟದಿಂದ ಕೈಬಿಟ್ಟು ರಾಜ್ಯ ಸರ್ಕಾರದ ಗೌರವ ಕಾಪಾಡಬೇಕು ಎಂದು ಆಗ್ರಹಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.