ಬಾಕಿ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ

7
ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ವಿ.ಮಂಜುಳಾ ಸೂಚನೆ

ಬಾಕಿ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ

Published:
Updated:
Deccan Herald

ಬೀದರ್‌: ‘ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಹೊಸ ಕಟ್ಟಡದಲ್ಲಿ ಬಾಕಿ ಉಳಿದ ಕಾಮಗಾರಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು’ ಎಂದು ವೈದ್ಯಕೀಯ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ವಿ.ಮಂಜುಳಾ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದಲ್ಲಿ ಗುರುವಾರ ಬ್ರಿಮ್ಸ್, ಲೋಕೋಪಯೋಗಿ ಇಲಾಖೆ ಮತ್ತು ನಾಗಾರ್ಜುನ ಕನ್‌ಸ್ಟ್ರಕ್ಷನ್ ಕಂಪನಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.

‘ನಿಗದಿಪಡಿಸಿದ ಅವಧಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸುವಲ್ಲಿ ವಿಫಲರಾಗಿದ್ದೀರಿ. ಬೇಗ ಕಾಮಗಾರಿಗಳನ್ನು ಪೂರ್ಣಗೊಳಿಸದಿದ್ದರೆ ಶಿಸ್ತು ಕ್ರಮ ಜರುಗಿಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.

‘ಐಸಿಯು, ಡಯಾಲಿಸಿಸ್ ಕೊಠಡಿ ಹಾಗೂ ಸೆಮಿನಾರ್‌ ಹಾಲ್‌ಗಳಲ್ಲಿ ಮಾತ್ರ ಹವಾನಿಯಂತ್ರಿತ ಯಂತ್ರ ಅಳವಡಿಸಬೇಕು. ಆಸ್ಪತ್ರೆಯಲ್ಲಿ ಅನಗತ್ಯವಾಗಿ ಸಾಮಗ್ರಿಗಳನ್ನು ಕೂಡಿಟ್ಟುಕೊಳ್ಳಬಾರದು’ ಎಂದು ಹೇಳಿದರು.

‘ಆಸ್ಪತ್ರೆಯ ಯಾವ ವಾರ್ಡ್‌ನಲ್ಲಿ ಇನ್ನೂ ಏನು ಆಗಬೇಕಿದೆ, ಎಲ್ಲಿ ದುರಸ್ತಿ ಮಾಡಬೇಕಿದೆ, ಯಾವ ಉಪಕರಣ ಎಲ್ಲಿ ಅಳವಡಿಸಬೇಕಿದೆ ಎನ್ನುವ ಕುರಿತು ಲೋಕೋಪಯೋಗಿ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಬೇಕು’ ಎಂದು ಬ್ರಿಮ್ಸ್ ನಿರ್ದೇಶಕರಿಗೆ ಸೂಚನೆ ನೀಡಿದರು.

ಬ್ರಿಮ್ಸ್ ನಿರ್ದೇಶಕ ಡಾ.ಚೆನ್ನಣ್ಣ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಸಿ.ಎಸ್.ರಗಟೆ, ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಶಾಂತ ಪಿ.ಆರ್., ಎಇಇ ಅಕಿಮತ್ ಅಹಮ್ಮದ್ ಖುರೇಶಿ, ಎಲೆಕ್ಟ್ರಿಕಲ್ ಎಂಜಿನಿಯರ್ ಶೇಖ ಇಬ್ರಾಹಿಂ, ಸಹಾಯಕ ಎಂಜಿನಿಯರ್ ಕುಪ್ಪಣ್ಣ ಇದ್ದರು.

ಇದಕ್ಕೂ ಮೊದಲು ಮಂಜುಳಾ ಅವರು ಆಸ್ಪತ್ರೆಯ ವಾರ್ಡ್‌ಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಆಸ್ಪತ್ರೆಯಲ್ಲಿ ಸ್ವಚ್ಛತೆ ಇಲ್ಲದಿರುವುದನ್ನು ಕಂಡು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ವೈದ್ಯರು ಹಾಗೂ ಅಧಿಕಾರಿಗಳೊಂದಿಗೆ ಪ್ರತ್ಯೇಕವಾಗಿ ಸಮಾಲೋಚನೆ ನಡೆಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !