ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮುಂದುವರಿದ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

Published 19 ಜೂನ್ 2024, 16:22 IST
Last Updated 19 ಜೂನ್ 2024, 16:22 IST
ಅಕ್ಷರ ಗಾತ್ರ

ಭಾಲ್ಕಿ: ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ-ಯುಕೆಜಿ ಆರಂಭಕ್ಕೆ ವಿರೋಧಿಸಿ ಪಟ್ಟಣದಲ್ಲಿ ಸಂಸದ ಸಾಗರ್ ಖಂಡ್ರೆ ಅವರ ಮನೆ ಮುಂದೆ ಅಂಗನವಾಡಿ ಕಾರ್ಯಕರ್ತೆಯರು ಬುಧವಾರ ಪ್ರತಿಭಟನೆ ನಡೆಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಸಂಸದ ಸಾಗರ್ ಖಂಡ್ರೆ ಅವರು, ಅಂಗನವಾಡಿ ಕಾರ್ಯಕರ್ತೆಯರು ತಮ್ಮ ಹುದ್ದೆ ಬಗ್ಗೆ ಆತಂಕ ಪಡುವ ಅವಶ್ಯಕತೆ ಇಲ್ಲ. ಸರ್ಕಾರ ಅಂಗನವಾಡಿ ಕಾರ್ಯಕರ್ತೆಯರ ಪರವಾಗಿದೆ. ನಮ್ಮ ಸರ್ಕಾರ ಮಹಿಳೆಯರಿಗಾಗಿ ಅನೇಕ ಕಾರ್ಯಕ್ರಮಗಳು ನೀಡುತ್ತಿದೆ ಎಂದು ತಿಳಿಸಿದರು.

ನಿಮ್ಮ ಆತಂಕ ಯುಕೆಜಿ, ಎಲ್‌ಕೆಜಿ ಆರಂಭದಿಂದ ಅಂಗನವಾಡಿ ಮುಚ್ಚುತ್ತವೆ ಎಂಬುದಾಗಿದೆ. ಆದರೆ, ಕಾಂಗ್ರೆಸ್ ಸರ್ಕಾರ ಯಾವ ಅಂಗನವಾಡಿ ಕೇಂದ್ರಗಳನ್ನೂ ಮುಚ್ಚಲು ಬಿಡುವುದಿಲ್ಲ. ಸರ್ಕಾರದ ಮಟ್ಟದಲ್ಲಿ ಚರ್ಚಿಸಿ, ಅಂಗನವಾಡಿ ಕಾರ್ಯಕರ್ತೆಯರಿಗೆ ಯಾವುದೇ ತೊಂದರೆಯಾಗದಂತೆ ಕಾರ್ಯಕ್ರಮ ರೂಪಿಸುವಂತೆ ನೋಡಿಕೊಳ್ಳಲಾಗುವುದು ಎಂದು ಭರವಸೆ ನೀಡಿದರು.

’ರಾಜ್ಯ ಸರ್ಕಾರ ಸರ್ಕಾರಿ ಶಾಲೆಗಳ ಎಲ್‌ಕೆಜಿ ಯುಕೆಜಿ ನಡೆಸುವ ಆದೇಶ ಹಿಂಪಡೆಯುವರೆಗೆ ನಮ್ಮ ಹೋರಾಟ ಮುಂದುವರೆಯಲಿದೆ’ ಎಂದು ಅಂಗನವಾಡಿ ಕಾರ್ಯಕರ್ತರ ಜಿಲ್ಲಾಧ್ಯಕ್ಷೆ ಸುಶೀಲಾ ಹತ್ತಿ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT