ಶುಕ್ರವಾರ, ಸೆಪ್ಟೆಂಬರ್ 24, 2021
27 °C

ಕೌಶಲ ಹೆಚ್ಚಿಸಿಕೊಳ್ಳಲು ವಾಯು ಸೇನಾನಿಗಳಿಗೆ ಸಲಹೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಯುವ ವಾಯು ಸೇನಾನಿಗಳು ತಮ್ಮ ಕೌಶಲ ಹೆಚ್ಚಿಸಿಕೊಳ್ಳಲು ಒತ್ತು ಕೊಡಬೇಕು ಎಂದು ಭಾರತೀಯ ವಾಯು ಸೇನೆಯ ಉಪ ಮುಖ್ಯಸ್ಥ ಏರ್ ಮಾರ್ಷಲ್ ವಿ.ಆರ್. ಚೌಧರಿ ಸಲಹೆ ಮಾಡಿದರು.

ಇಲ್ಲಿಯ ವಾಯುಪಡೆ ತರಬೇತಿ ಕೇಂದ್ರದಲ್ಲಿ ನಡೆದ ಪೈಲಟ್ ಹಾಗೂ ಆಯುಧ ವ್ಯವಸ್ಥೆ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಕೋವಿಡ್ ನಡುವೆಯೂ ತರಬೇತಿಯನ್ನು ಸಕಾಲಕ್ಕೆ ಪೂರ್ಣಗೊಳಿಸಿದ್ದಕ್ಕೆ ಸಂತಸ ವ್ಯಕ್ತಪಡಿಸಿದರು.

ತರಬೇತಿಯಲ್ಲಿ ತೇರ್ಗಡೆಯಾದವರಿಗೆ ಪ್ರಮಾಣ ಪತ್ರ ಹಾಗೂ ಪದಕ ವಿತರಿಸಲಾಯಿತು.

ಬೀದರ್ ವಾಯು ಪಡೆ ತರಬೇತಿ ಕೇಂದ್ರದ ಮುಖ್ಯಸ್ಥ ಸಮೀರ್ ಸೋಂಧಿ ಅವರು ಚೌಧರಿ ಅವರಿಗೆ ಕೇಂದ್ರದ ಬಗ್ಗೆ ವಿವರ ನೀಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು