ಸೋಮವಾರ, ಮೇ 17, 2021
23 °C
ಶಾಸಕರ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸದಸ್ಯರ ಸಭೆ

ಪ್ರತಿಯೊಬ್ಬರು ಲಸಿಕೆ ಪಡೆಯಲು ಶಾಸಕ ರಾಜಶೇಖರ ಪಾಟೀಲ ಸಲಹೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಮನಾಬಾದ್: ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಅದರ ನಿಯಂತ್ರಣಕ್ಕೆ ಎಲ್ಲ ಅಧಿಕಾರಿಗಳು ಶ್ರಮಿಸಬೇಕು ಎಂದು ಶಾಸಕ ರಾಜಶೇಖರ ಪಾಟೀಲ ತಿಳಿಸಿದರು.

ತಾಲ್ಲೂಕಿನ ಹಳ್ಳಿಖೇಡ್ (ಬಿ) ಪುರಸಭೆ ಆವರಣದಲ್ಲಿ ನಡೆದ ಸರ್ವ ಪಕ್ಷದ ಸದಸ್ಯರ ಸಭೆಯಲ್ಲಿ ಅವರು ಮಾತನಾಡಿದರು.

ಕೋವಿಡ್ ಬಗ್ಗೆ ಪ್ರತಿ ಬಡಾವಣೆಯ ಜನರಲ್ಲಿ ಜಾಗೃತಿ ಮೂಡಿಸಿ. ಪ್ರತಿಯೊಬ್ಬರು ಲಸಿಕೆಯನ್ನು ಪಡೆದರೆ ಕೋವಿಡ್ ಸೋಂಕಿನಿಂದ ಪಾರಾಗಲು ಸಾಧ್ಯವಿದೆ ಎಂದು ಹೇಳಿದರು.

ಪುರಸಭೆ ಮುಖ್ಯಾಧಿಕಾರಿ ಮತ್ತು ಸಿಬ್ಬಂದಿ ಸೇರಿ ಜನರಿಗೆ ಕಡ್ಡಾಯವಾಗಿ ಮಾಸ್ಕ್, ಸ್ಯಾನಿಟೈಸರ್, ಅಂತರವನ್ನು ಕಾಪಾಡಿಕೊಳ್ಳವಂತೆ ಅರಿವು ಮೂಡಿಸಬೇಕು. ಅಗತ್ಯ ವಸ್ತುಗಳಾದ ತರಕಾರಿ, ಹಣ್ಣುಗಳನ್ನು ಖರೀದಿಸಲು ಪ್ರತ್ಯೇಕವಾದ ಸ್ಥಳದ ವ್ಯವಸ್ಥೆಯನ್ನು ಪುರಸಭೆ ಕಲ್ಪಿಸಬೇಕು. ವ್ಯಾಪಾರಸ್ಥರಿಗೆ ಮತ್ತು ಗ್ರಾಹಕರಿಗೆ ಕಡ್ಡಾಯವಾಗಿ ಮಾಸ್ಕ್‌ಗಳನ್ನು ಧರಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಬೇಕು ಎಂದು ತಿಳಿಸಿದರು.

ಸಾರ್ವಜನಿಕರು ನೆಪ ಹೇಳಿಕೊಂಡು ಓಡಾಡುವುದನ್ನು ನಿಲ್ಲಿಸಬೇಕು. ಅಗತ್ಯವಿದ್ದರೆ ಮಾತ್ರ ಮನೆಗಳಿಂದ ಹೊರಗೆ ಬನ್ನಿ. ಬರುವಾಗ ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು. ಕೋವಿಡ್ ಭಯವನ್ನು ಬಿಟ್ಟು ಸುರಕ್ಷತೆಯನ್ನು ಕಾಪಾಡಿಕೊಂಡು ಧೈರ್ಯದಿಂದ ಇರಬೇಕು. ಸ್ವಲ್ಪ ದಿನ ಯಾವುದೇ ಸಭೆ, ಸಮಾರಂಭಗಳಲ್ಲಿ ಭಾಗವಹಿಸಬಾರದು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಜಿಲ್ಲಾ ಪಂಚಾಯಿತಿ ಸದಸ್ಯ ಲಕ್ಷ್ಮಣರಾವ ಬುಳ್ಳಾ, ಹಳ್ಳಿಖೇಡ್ ಬಿ. ಪುರಸಭೆ ಅಧ್ಯಕ್ಷ ಮಹಾಂತಯ್ಯ ತೀರ್ಥ, ಪುರಸಭೆ ಉಪಾಧ್ಯಕ್ಷೆ ಹುರ್ಮತ್ ಬೇಗಂ, ತಹಶೀಲ್ದಾರ್ ಜೈಶ್ರೀ, ತಾಲ್ಲೂಕು ನೋಡಲ್ ಅಧಿಕಾರಿ ಡಾ.ಗೋವಿಂದ್, ಪುರಸಭೆ ಮುಖ್ಯಾಧಿಕಾರಿ ಮಹಮ್ಮದ್, ಪುರಸಭೆ ಸದಸ್ಯರಾದ ಅಬ್ದುಲ್ ರಜಾಕ್, ಸಾಜಿದ್‌ ಪಟೇಲ್, ಯೂಸೋಫ್, ನಾಗರಾಜ, ಅಬ್ದುಲ್ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.