ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್‌: ವಕೀಲನ ಕೊಲೆ ಖಂಡಿಸಿ ವಕೀಲರ ಪ್ರತಿಭಟನೆ

Published 8 ಡಿಸೆಂಬರ್ 2023, 8:26 IST
Last Updated 8 ಡಿಸೆಂಬರ್ 2023, 8:26 IST
ಅಕ್ಷರ ಗಾತ್ರ

ಬೀದರ್‌: ಕಲಬುರಗಿಯಲ್ಲಿ ವಕೀಲ ಈರಣ್ಣಗೌಡ ಪೊಲೀಸ್‌ ಪಾಟೀಲ ಅವರ ಕೊಲೆ ಖಂಡಿಸಿ ಜಿಲ್ಲಾ ವಕೀಲರ ಸಂಘದವರು ನಗರದಲ್ಲಿ ಶುಕ್ರವಾರ ಪ್ರತಿಭಟನಾ ರ್‍ಯಾಲಿ ನಡೆಸಿದರು.

ನಗರದ ನ್ಯಾಯಾಲಯದ ಆವರಣದಲ್ಲಿರುವ ಜಿಲ್ಲಾ ವಕೀಲರ ಸಂಘದ ಕಚೇರಿಯಿಂದ ಪ್ರಮುಖ ಮಾರ್ಗಗಳ ಮೂಲಕ ಜಿಲ್ಲಾಧಿಕಾರಿ ಕಚೇರಿ ವರೆಗೆ ರ್‍ಯಾಲಿ ನಡೆಸಿದರು. ಅನಂತರ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೆಸರಿಗೆ ಬರೆದ ಮನವಿ ಪತ್ರ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್‌.ಎಲ್‌. ಅವರಿಗೆ ಸಲ್ಲಿಸಿದರು.

ಕಲಬುರಗಿಯಲ್ಲಿ ವಕೀಲ ಈರಣ್ಣಗೌಡ ಅವರ ಕೊಲೆ ನಡೆದಿರುವುದು ನೋಡಿದರೆ ರಾಜ್ಯದಲ್ಲಿ ವಕೀಲರಿಗೆ ರಕ್ಷಣೆ ಇಲ್ಲ ಎಂದು ಗೊತ್ತಾಗುತ್ತದೆ. ವಕೀಲರು ಭಯ, ಆತಂಕದಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿದರು.

ಇತ್ತೀಚೆಗೆ ಭಾಲ್ಕಿಯಲ್ಲಿ ವಕೀಲೆ ಧನಲಕ್ಷ್ಮಿ ಎಂಬುವರ ಮೇಲೆ ತಡರಾತ್ರಿ ಅವರ ಮನೆಗೆ ಹೋಗಿ ಪೊಲೀಸರು ದೌರ್ಜನ್ಯ ಎಸಗಿದ್ದಾರೆ. ಈ ಸಂಬಂಧ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದರೂ ಇದುವರೆಗೆ ಯಾವುದೇ ಕ್ರಮ ಜರುಗಿಸಿಲ್ಲ. ವಕೀಲರ ಮೇಲೆ ಸತತವಾಗಿ ನಡೆಯುತ್ತಿರುವ ಹಲ್ಲೆ, ಕೊಲೆ ಪ್ರಕರಣಗಳನ್ನು ತಡೆಯಲು ರಾಜ್ಯ ಸರ್ಕಾರವು ವಕೀಲರ ರಕ್ಷಣಾ ಕಾಯ್ದೆ ಜಾರಿಗೆ ತರಬೇಕೆಂದು ಆಗ್ರಹಿಸಿದರು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಮಹೇಶಕುಮಾರ ಎಸ್‌. ಪಾಟೀಲ, ಉಪಾಧ್ಯಕ್ಷೆ ಹೇಮಾ ಎಸ್‌. ಬಿರಾದಾರ, ಜಂಟಿ ಕಾರ್ಯದರ್ಶಿ ರವಿಕಾಂತ ವಿ. ಪಾಟೀಲ, ಪ್ರಧಾನ ಕಾರ್ಯದರ್ಶಿ ಪರಮೇಶ್ವರ ಎಂ. ಬಂಬುಳಗೆ, ಖಜಾಂಚಿ ಕೋಮಲ್‌ ಎಸ್‌. ಪಾಟೀಲ, ವಕೀಲರಾದ ಅನಿಲಕುಮಾರ ಕರಂಜೆ, ಶಿವಶಂಕರ ಬಿರಾದಾರ, ಸಂಗಮೇಶ ಪಾಟೀಲ, ಹಣಮಂತರಾವ ಸಿಂದೋಲ, ಉಲ್ಲಾಸಿನಿ ಇತರರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT