ಭಾನುವಾರ, ಮೇ 22, 2022
29 °C
ಮಂಠಾಳ, ಧನ್ನೂರ(ಕೆ)ನಲ್ಲಿ ಕೃಷಿ ಸಚಿವರ ಕಾರ್ಯಕ್ರಮ

ಬಸವಕಲ್ಯಾಣ: ‘ರೈತರೊಂದಿಗೊಂದು ದಿನ’ ನಾಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಸವಕಲ್ಯಾಣ: ತಾಲ್ಲೂಕಿನ ಮಂಠಾಳ ಹಾಗೂ ಧನ್ನೂರ(ಕೆ) ಗ್ರಾಮಗಳಲ್ಲಿ ಫೆಬ್ರುವರಿ 20ರಂದು ಜಿಲ್ಲಾ ಪಂಚಾಯಿತಿ ಮತ್ತು ಕೃಷಿ ಇಲಾಖೆ ಆಶ್ರಯದಲ್ಲಿ ರೈತರೊಂದಿಗೊಂದು ದಿನ ಕಾರ್ಯಕ್ರಮ ಆಯೋಜಿಸಲಾಗಿದ್ದು, ಕೃಷಿ ಸಚಿವ ಬಿ.ಸಿ.ಪಾಟೀಲ ಪಾಲ್ಗೊಳ್ಳಲಿದ್ದಾರೆ.

ಮಂಠಾಳದಲ್ಲಿ ನಡೆಯುವ ವಿವಿಧ ಚಟುವಟಿಕೆಗಳನ್ನು ಕೃಷಿ ಸಚಿವ ಬಿ.ಸಿ.ಪಾಟೀಲ ಉದ್ಘಾಟಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಅಧ್ಯಕ್ಷತೆ ವಹಿಸುವರು. ಸಂಸದ ಭಗವಂತ ಖೂಬಾ ವಸ್ತು ಪ್ರದರ್ಶನ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ನಿರ್ಮಲಾ ಮಾನೆಗೋಪಾಳೆ, ಶಾಸಕರಾದ ರಾಜಶೇಖರ ಪಾಟೀಲ, ಈಶ್ವರ ಖಂಡ್ರೆ, ಬಂಡೆಪ್ಪ ಕಾಶೆಂಪೂರ್‌, ರಹೀಂಖಾನ್, ವಿಧಾನ ಪರಿಷತ್ ಸದಸ್ಯರಾದ ರಘುನಾಥರಾವ್ ಮಲ್ಕಾಪುರೆ, ವಿಜಯಸಿಂಗ್, ಅರವಿಂದಕುಮಾರ ಅರಳಿ, ಡಾ.ಚಂದ್ರಶೇಖರ ಪಾಟೀಲ, ಶಶೀಲ್‌ ಜಿ. ನಮೋಶಿ, ರಾಜ್ಯ ಕೈಗಾರಿಕಾ ಮತ್ತು ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ.ಶೈಲೇಂದ್ರ ಬೆಲ್ದಾಳೆ, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ವಿಜಯಕುಮಾರ ಪಾಟೀಲ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಯಶೋಧಾ ರಾಠೋಡ್‌, ಗ್ರಾಮ ಪಂಚಾಯಿತಿ ಅಧ್ಯಕ್ಷ ಹಣಮಂತ ಪದ್ಮೆ ಪಾಲ್ಗೊಳ್ಳುವರು.

ವಿಶೇಷ ಆಹ್ವಾನಿತರಾಗಿ ಜಿಲ್ಲಾ ಪಂಚಾಯಿತಿ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷೆ ಮಂಜುಳಾ ಸ್ವಾಮಿ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಅಮ್ರಪಾಲಿ ವೀರಣ್ಣ, ಅಣ್ಣಾರಾವ್ ರಾಠೋಡ, ಜಿಲ್ಲಾ ಕೃಷಿಕ ಸಮಾಜ ಅಧ್ಯಕ್ಷ ರಾಜಕುಮಾರ ಸಿಂಗ್ ಹಜಾರಿ, ಕೃಷಿಕ ಸಮಾಜ ರಾಜ್ಯ ಪ್ರತಿನಿಧಿ ಸಿದ್ರಾಮಪ್ಪ ಸ್ವಾಮಿ, ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ಸಂಗಮೇಶಪ್ಪಾ ಬಿರಾದಾರ, ಓಂಪ್ರಕಾಶ ಪಾಟೀಲ, ಮಹಾದೇವಿ ಶಾಂತಪ್ಪ, ಗುರುನಾಥ ಅಣ್ಣೆಪ್ಪ, ನರಸಾರೆಡ್ಡಿ, ಮಂಠಾಳ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಸವಿತಾ ಮಲ್ಲಿಕಾರ್ಜುನ ಪಾಲ್ಗೊಳ್ಳುವರು.

ಕೃಷಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ರಾಜಕುಮಾರ ಖತ್ರಿ, ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ವ್ಯವಸ್ಥಾಪಕ ನಿರ್ದೇಶಕ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ರಿಚರ್ಡ್ ಡಿಸೋಜಾ, ಕೃಷಿ ಆಯುಕ್ತ ಬ್ರಿಜೇಶಕುಮಾರ ದೀಕ್ಷಿತ್, ಜಲಾನಯನ ಅಭಿವೃದ್ಧಿ ಇಲಾಖೆ ಪ್ರಭಾರ ಆಯುಕ್ತ ಎ.ಪದ್ಮಯ್ಯ ನಾಯಕ್, ಕೃಷಿ ನಿರ್ದೇಶಕ ಬಿ.ವೈ.ಶ್ರೀನಿವಾಸ, ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಕೆ.ಎನ್.ಕಟ್ಟಿಮನಿ, ಪಶು ವೈದ್ಯಕೀಯ, ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ.ಎಚ್.ಡಿ. ನಾರಾಯಣ ಸ್ವಾಮಿ, ತೋಟಗಾರಿಕೆ ಮಹಾವಿದ್ಯಾಲಯದ ಡೀನ್ ರವೀಂದ್ರ ಮೂಲಗೆ, ಜಿಲ್ಲಾಧಿಕಾರಿ ರಾಮಚಂದ್ರ ಆರ್, ಜಿಲ್ಲಾ ಪಂಚಾಯಿತಿ ಸಿಇಒ ಜಹೀರಾ ನಸೀಮ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ್ ಡಿ.ಎಲ್, ಜಂಟಿ ಕೃಷಿ ನಿರ್ದೇಶಕ ತಾರಾಮಣಿ ಜಿ.ಎಚ್. ಅವರು ಉಪಸ್ಥಿತರಿರುವರು ಎಂದು ಉಪ ಕೃಷಿ ನಿರ್ದೇಶಕ ಸೋಮಶೇಖರ ಬಿರಾದಾರ, ಸಹಾಯಕ ಕೃಷಿ ನಿರ್ದೇಶಕ ವೀರಶೆಟ್ಟಿ ರಾಠೋಡ ಜಂಟಿಯಾಗಿ ತಿಳಿಸಿದ್ದಾರೆ.

ಸಚಿವರ ಕ್ಷೇತ್ರ ಭೇಟಿ

ಫೆ.20ರಂದು ಬೆಳಿಗ್ಗೆ 9.30 ಗಂಟೆಗೆ ಕೃಷಿ ಸಚಿವ ಬಿ.ಸಿ.ಪಾಟೀಲ ಧನ್ನೂರ (ಕೆ) ಗ್ರಾಮದ ವ್ಯಾಪ್ತಿಯ ಕ್ಷೇತ್ರ ಭೇಟಿ ಮಾಡುವರು.

ಅದೇ ರೀತಿ ಮುಸ್ತಾಪುರ ಗ್ರಾಮದ ವ್ಯಾಪ್ತಿಯ ಕ್ಷೇತ್ರ ಭೇಟಿ ಬೆಳಿಗ್ಗೆ 11, ಧನ್ನೂರ (ಕೆ) ಗ್ರಾಮದ ವ್ಯಾಪ್ತಿಯ ಕ್ಷೇತ್ರ ಭೇಟಿ ಬೆಳಿಗ್ಗೆ 11.40, ಖಾನಾಪುರ ಗ್ರಾಮದ ವ್ಯಾಪ್ತಿಯ ಕ್ಷೇತ್ರ ಭೇಟಿ ಮಧ್ಯಾಹ್ನ 12.15, ಮಂಠಾಳ ಗ್ರಾಮದ ವ್ಯಾಪ್ತಿಯ ಕ್ಷೇತ್ರ ಭೇಟಿ ಮಧ್ಯಾಹ್ನ 12.30 ಮಾಡುವರು.

ನಂತರ ಮಧ್ಯಾಹ್ನ 2ರಿಂದ ವೇದಿಕೆ ಕಾರ್ಯಕ್ರಮ ನಡೆಯಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು