ಭಾನುವಾರ, ಮೇ 29, 2022
22 °C

ವಾಯುಪಡೆ ತರಬೇತಿ ಕೇಂದ್ರಕ್ಕೆ ಏರ್‌ ಮಾರ್ಷಲ್ ಮಾಥೂರ್ ಭೇಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್‌: ಭಾರತೀಯ ವಾಯು ಸೇನಾ ತರಬೇತಿ ವಿಭಾಗದ ಮುಖ್ಯಸ್ಥ ಏರ್‌ ಮಾರ್ಷಲ್ ಆರ್.ಡಿ.ಮಾಥೂರ್ ಇಲ್ಲಿಯ ವಾಯು ಪಡೆ ತರಬೇತಿ ಕೇಂದ್ರಕ್ಕೆ ಭಾನುವಾರ ಭೇಟಿ ನೀಡಿದರು.

ಕೇಂದ್ರದ ಮುಖ್ಯಸ್ಥ ಏರ್ ಕಮಾಡೋರ್ ನಿಖಿಲೇಶ್ ಗೌತಮ್ ಅವರು ಕೇಂದ್ರದ ನಿರ್ವಹಣೆ ಹಾಗೂ ಆಡಳಿತ ವ್ಯವಸ್ಥೆ ಕುರಿತು ಮಾಹಿತಿ ನೀಡಿದರು.

ಪೈಲಟ್ ಹಾಗೂ ಶಸ್ತ್ರಾಸ್ತ್ರ ಬಳಕೆ ತರಬೇತಿ ಮುಕ್ತಾಯಗೊಳಿಸಿದ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ವಿತರಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಶುಭಕೋರಿದರು.

ವಾಯು ಪಡೆ ಅಧಿಕಾರಿ ಸಮರ್ಥ ಶುಕ್ಲ ಅವರಿಗೆ ಅತ್ಯುತ್ತಮ ವಿದ್ಯಾರ್ಥಿ ಪ್ರಶಸ್ತಿ ಪ್ರದಾನ ಮಾಡಲಾಯಿತು, 52 ವಾರಗಳ ತರಬೇತಿ ಪೂರೈಸಿದೆ 18 ಪೈಲಟ್ ಹಾಗೂ ಯುದ್ಧ ವಿಮಾನ ಶಸ್ತ್ರಾಸ್ತ್ರ ಬಳಕೆಯ ತರಬೇತಿ ಪಡೆದ ಇಬ್ಬರಿಗೆ
ಪ್ರಮಾಣಪತ್ರ ನೀಡಲಾಯಿತು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು