ಆ.30ರಂದು ಮಧ್ಯಾಹ್ನ 3ಕ್ಕೆ ಸಾರ್ವಜನಿಕರಿಗೆ ಏರ್ ಶೋ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದ್ದು, ನಿಗದಿತ ಸಮಯದೊಳಗೆ ಬರಬೇಕು. ಆ. 31ರಂದು ಮಧ್ಯಾಹ್ನ 3ಕ್ಕೆ ಎಲ್ಲ ಶಾಲಾ–ಕಾಲೇಜು ವಿದ್ಯಾರ್ಥಿಗಳು, ಸರ್ಕಾರಿ ನೌಕರರು ಮತ್ತು ಅವರ ಕುಟುಂಬದವರಿಗೆ ಏರ್ ಶೋ ವೀಕ್ಷಣೆಗೆ ವ್ಯವಸ್ಥೆಗೆ ಮಾಡಲಾಗಿದೆ. ಸರ್ಕಾರಿ ನೌಕರರು ಕಡ್ಡಾಯವಾಗಿ ಗುರುತಿನ ಚೀಟಿಯೊಂದಿಗೆ ವಿದ್ಯಾರ್ಥಿಗಳೊಂದಿಗೆ ಬರಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ತಿಳಿಸಿದ್ದಾರೆ.