ಶುಕ್ರವಾರ, ಏಪ್ರಿಲ್ 23, 2021
22 °C

ಬಸವಕಲ್ಯಾಣ: ಯುವತಿ ಜತೆ ಅಸಭ್ಯ ವರ್ತನೆ, ಆರೋಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಸವಕಲ್ಯಾಣ: ಹುಲಸೂರ ತಾಲ್ಲೂಕಿನ ಗಡಿಗೌಡಗಾಂವದಲ್ಲಿ ಧಾರ್ಮಿಕ ಮುಖಂಡರೊಬ್ಬರು ಯುವತಿ ಜೊತೆಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂಬ ಸುದ್ದಿ ಹರಡಿದ್ದರಿಂದ ಗ್ರಾಮದಲ್ಲಿ ಭಾನುವಾರ ಅಶಾಂತಿ ವಾತಾವರಣ ನಿರ್ಮಾಣವಾಗಿತ್ತು.

ಇದರ ಬಗ್ಗೆ ಗ್ರಾಮದಲ್ಲಿ ಸಭೆ ನಡೆಯಿತು. ದುರ್ವರ್ತನೆ ನಡೆಸಿರುವವರು ಊರಲ್ಲಿ ಇರಬಾರದು ಎಂಬ ಒಮ್ಮತದ ಅಭಿಪ್ರಾಯ ಕೈಗೊಳ್ಳಲಾಯಿತು. ಆರೋಪ ಹೊತ್ತಿರುವವರು ಊರಿನಿಂದ ಹೊರ ಹೋಗಿದ್ದಾರೆ ಎನ್ನಲಾಗುತ್ತಿದೆ.

ಜಿಲ್ಲೆಯ ಇಬ್ಬರು ಪ್ರಭಾವಿ ಧಾರ್ಮಿಕ ಮುಖಂಡರು ಸ್ಥಳಕ್ಕೆ ಬಂದು ಸಂಧಾನ ನಡೆಸಿದರಾದರೂ ಪ್ರಯೋಜನ ಆಗಲಿಲ್ಲ ಎಂದೂ ತಿಳಿದು ಬಂದಿದೆ.

ಗಡಿಗೌಡಗಾಂವ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ ಇರುವ ಕಾರಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು