ಮಂಗಳೂರಿನಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆ ಸಂದರ್ಭದಲ್ಲಿ ಐವನ್ ಡಿಸೋಜಾ ಅವರು, ಕರ್ನಾಟಕದ ರಾಜ್ಯಪಾಲರ ವಿರುದ್ಧ ಬಾಂಗ್ಲಾದೇಶದಲ್ಲಿ ಆಗಿರುವ ಹಿಂಸಾಚಾರದ ಸ್ವರೂಪದಲ್ಲಿ ದಾಳಿ ನಡೆಸುವುದಾಗಿ ಬೆದರಿಕೆ ಹಾಕಿ ಪ್ರಚೋದಿಸಿದ್ದಾರೆ. ರಾಜ್ಯಪಾಲರನ್ನು ರಾಷ್ಟ್ರಪತಿ ವಾಪಸ್ ಕರೆಸಿಕೊಳ್ಳಬೇಕು. ರಾಜ್ಯಪಾಲರು ರಾಜ್ಯ ಬಿಟ್ಟು ಹೋಗಬೇಕು. ಇಲ್ಲದಿದ್ದರೆ ರಾಜಭವನ ನುಗ್ಗುವುದು ಖಂಡಿತ. ರಾಜಭವನದಲ್ಲಿ ಏನಾದರೂ ಆದರೆ ಅದಕ್ಕೆ ಕೇಂದ್ರ ಸರ್ಕಾರ ಹೊಣೆ ಎಂದು ದೇಶದ್ರೋಹದ ಹೇಳಿಕೆಗಳನ್ನು ಕೊಟ್ಟಿದ್ದಾರೆ. ಅವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಕಾನೂನು ಪ್ರಕಾರ ಕ್ರಮ ಜರುಗಿಸಬೇಕೆಂದು ಬಿಜೆಪಿ ಆಗ್ರಹಿಸಿದೆ.