ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ದೇಶ ಕಂಡ ಮಹಾನ್ ನಾಯಕ ಅಂಬೇಡ್ಕರ್’

ಔರಾದ್‍ನಲ್ಲಿ ಡಾ. ಅಂಬೇಡ್ಕರ್ ಓದು ಕಾರ್ಯಕ್ರಮ
Published 22 ನವೆಂಬರ್ 2023, 14:19 IST
Last Updated 22 ನವೆಂಬರ್ 2023, 14:19 IST
ಅಕ್ಷರ ಗಾತ್ರ

ಔರಾದ್: ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಭಾರತ ಕಂಡ ಮಹಾನ್ ವ್ಯಕ್ತಿತ್ವದ ಅಪರೂಪದ ನಾಯಕ’ ಎಂದು ಸಂಪನ್ಮೂಲ ಶಿಕ್ಷಕ ಶಾಮಸುಂದರ ಖಾನಾಪುರ ಹೇಳಿದರು.

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ನಡೆದ ಡಾ. ಅಂಬೇಡ್ಕರ್ ಓದು ಕಾರ್ಯಕ್ರಮದಲ್ಲಿ ಅವರು ಉಪನ್ಯಾಸ ನೀಡಿದರು.

‘ಅಂಬೇಡ್ಕರ್ ಅವರ ಚಿಂತನೆಗಳು ನಮಗೆಲ್ಲಾ ಸ್ಫೂರ್ತಿಯಾಗಿದ್ದು, ಅವರು ನೀಡಿದ ಸಮಾನತೆಯ ತತ್ವಗಳು ಇಂದು ಎಲ್ಲ ಜನಾಂಗದವರಿಗೆ ಸಮಾನ ಅವಕಾಶಗಳನ್ನು ಕಲ್ಪಿಸಿದೆ. ಸಮಾಜದಲ್ಲಿನ ಅನ್ಯಾಯ ವಿರುದ್ಧ ಹೋರಾಡುವಂತಾಗಬೇಕು. ಕೇವಲ ದೇವರ ದೃಷ್ಟಿಯಲ್ಲಿ ಎಲ್ಲರೂ ಸಮಾನರಾದರೆ ಸಾಲದು, ಮನುಷ್ಯರ ದೃಷ್ಟಿಯಲ್ಲಿ ಎಲ್ಲರೂ ಸಮಾನರಾಗಬೇಕು’ ಎಂದು ಹೇಳಿದರು.

ಕಾರ್ಯಕ್ರಮ ಉದ್ಘಾಟಿಸಿದ ತಹಶೀಲ್ದಾರ್ ಮಲಶೆಟ್ಟಿ ಚಿದ್ರೆ ಮಾತನಾಡಿ,‘ವಿದ್ಯೆ, ಉದ್ಯೋಗ, ಸಾಮಾಜಿಕ ನ್ಯಾಯ ಸರಿಯಾಗಿ ಸಿಗಬೇಕಾದರೆ ಇಂದಿನ ಯುವ ಪಿಳಿಗೆಗೆ ಸಂವಿಧಾನ ಅಂಬೇಡ್ಕರ ಜೀವನ ಹೋರಾಟ ಮಾದರಿಯಾಗಬೇಕು’ ಎಂದರು.

ಪ್ರಾಂಶುಪಾಲ ಸೂರ್ಯಕಾಂತ ಚಿದ್ರೆ,‘ಶಿಕ್ಷಣದಿಂದ ಸಮಾಜದಲ್ಲಿ ಸಮಾನತೆ ಸಾಧ್ಯ. ಅವಕಾಶ ವಂಚಿತ ಸಮುದಾಯಗಳಲ್ಲಿನ ವ್ಯಕ್ತಿಗಳನ್ನು ಮುಖ್ಯಭೂಮಿಕೆಗೆ ಕರೆತರುವಲ್ಲಿ ಶಿಕ್ಷಣದ ಪಾತ್ರ ಮಹತ್ವ’ ಎಂದು ಹೇಳಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಶಿಂಧೆ ಮಾತನಾಡಿದರು. ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಅನಿಲಕುಮಾರ್ ಮೇಲದೊಡ್ಡಿ, ಆಂತರಿಕ ಗುಣಮಟ್ಟ ಭರವಸಾ ಕೋಶದ ಸಂಯೋಜಕಿ ಜೈಶೀಲಾ, ವಿದ್ಯಾರ್ಥಿ ಕಲ್ಯಾಣಧಿಕಾರಿ ಸಂಜೀವಕುಮಾರ್ ತಾಂದಳೆ, ಸುಧಾಕರ ಎಲ್ಲಾನೂರ್, ರತ್ನದೀಪ ಕಸ್ತೂರೆ, ಪ್ರೊ. ಮಹೇಶ್, ರಾಹುಲ್ ಜಾಧವ್ ಇದ್ದರು.

ಪ್ರಬಂಧ ಹಾಗೂ ಭಾಷಣ ಸ್ಪರ್ಧೆ ವಿಜೇತ ವಿದ್ಯಾರ್ಥಿಗಳಿಗೆ ಅಂಬೇಡ್ಕರ್ ಜೀವನ ಕುರಿತ ಪುಸ್ತಕಗಳನ್ನು ವಿತರಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT