ಬುಧವಾರ, ಏಪ್ರಿಲ್ 1, 2020
19 °C

ಜ.14ರಂದು ಅಂಬಿಗರ ಚೌಡಯ್ಯ ಜಯಂತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೀದರ್: ಹಾವೇರಿ ಜಿಲ್ಲೆಯ ನರಸಿಂಹಪುರದಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಅವರ 900ನೇ ಜಯಂತ್ಯುತ್ಸವದ ಪ್ರಯುಕ್ತ ಜನವರಿ 14 ಹಾಗೂ 15 ರಂದು ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿ ತಿಳಿಸಿದರು.

ಜನವರಿ 14 ರಂದು ಸಂಜೆ 5.30ಕ್ಕೆ ಉದ್ಘಾಟನೆ ಕಾರ್ಯಕ್ರಮ ನಡೆಯಲಿದೆ. ಜ 15 ರಂದು ಬೆಳಿಗ್ಗೆ 8.30ಕ್ಕೆ ಧ್ವಜಾರೋಹಣ, ಸಾಮೂಹಿಕ ಸರಳ ವಿವಾಹ ಮಹೋತ್ಸವ, ವಚನಗ್ರಂಥ ಮೆರವಣಿಗೆ ನಡೆಯಲಿದೆ ಎಂದು ನಗರದಲ್ಲಿ ಬುಧವಾರ ಮಾಧ್ಯಮಗೋಷ್ಠಿಯಲ್ಲಿ ಹೇಳಿದರು.

‘ಶಾಂತಮುನಿ ಸ್ವಾಮೀಜಿಯ ನಾಲ್ಕನೆಯ ಸ್ಮರಣೋತ್ಸವ, ಶಾಂತಭೀಮ ಸ್ವಾಮೀಜಿಯ ತೃತೀಯ ಪೀಠಾರೋಹಣದ ವಾರ್ಷಿಕೋತ್ಸವ ಹಾಗೂ ಸರಳ ಸಾಮೂಹಿಕ ವಿವಾಹ ನಡೆಯಲಿದೆ’ ಎಂದು ತಿಳಿಸಿದರು.

‘ಸಮಾರಂಭದಲ್ಲಿ 5 ಲಕ್ಷ ಜನ ಸೇರುವ ನಿರೀಕ್ಷೆ ಇದೆ. ನಾಡಿನ ಮಠಾಧೀಶರು, ಶರಣರು, ಸಂತರು ಸಾಹಿತಿಗಳು ಉಪನ್ಯಾಸ ನೀಡುವರು. ಬೀದರ್‌ ಜಿಲ್ಲೆಯಿಂದಲೂ ಅಪಾರ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸುವರು’ ಎಂದರು.

ಜಗನ್ನಾಥ ಜಮಾದಾರ, ಬಸವರಾಜ ಸಪ್ಪನಗೋಳ, ಸುನೀಲ ಕಾಶೆಂಪೂರ್, ಪಾಂಡುರಂಗ ಗುರೂಜಿ, ಸುನೀಲ ಭಾವಿಕಟ್ಟಿ ಹಾಗೂ ಶಿವರಾಜ ಬಂಬುಳಗಿ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು