ಭಾನುವಾರ, ಮೇ 29, 2022
29 °C

ಬಿಜೆಪಿ ಕಚೇರಿಯಲ್ಲಿ ಅಂಬಿಗರ ಚೌಡಯ್ಯ ಜಯಂತಿ ಆಚರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ನಗರದ ಬಿಜೆಪಿ ಜಿಲ್ಲಾ ಘಟಕದ ಕಚೇರಿಯಲ್ಲಿ ಅಂಬಿಗರ ಚೌಡಯ್ಯ ಜಯಂತಿ ಆಚರಿಸಲಾಯಿತು.

ಪಕ್ಷದ ಕಲಬುರ್ಗಿ ವಿಭಾಗ ಸಹ ಪ್ರಭಾರಿ ಈಶ್ವರಸಿಂಗ್ ಠಾಕೂರ್ ಹಾಗೂ ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುವಾಲಿ ಅವರು ಜಂಟಿಯಾಗಿ ಅಂಬಿಗರ ಚೌಡಯ್ಯ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಮಾಲಾರ್ಪಣೆ ಮಾಡಿ ಗೌರವಿಸಿದರು.

ಅಂಬಿಗರ ಚೌಡಯ್ಯ 12ನೇ ಶತಮಾನದ ಶರಣರಲ್ಲಿ ಒಬ್ಬರಾಗಿದ್ದರು ಎಂದು ಚೌಡಯ್ಯ ಅವರ ಕುರಿತು ಉಪನ್ಯಾಸ ನೀಡಿದ ಮುಖಂಡ ರವೀಂದ್ರ ಬಾಲೆಬಾಯಿ ಹೇಳಿದರು.

ಬಸವಣ್ಣನವರ ಆಪ್ತರಾಗಿದ್ದರು. ಕಾಯಕ ನಿಷ್ಠೆ, ನೇರ ನಡೆ-ನುಡಿಗೆ ಹೆಸರಾಗಿದ್ದರು ಎಂದು ತಿಳಿಸಿದರು.

ಬಿಜೆಪಿ ಎಸ್.ಟಿ. ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಮಹೇಶ ಪಾಲಂ, ಬೀದರ್ ನಗರ ಘಟಕದ ಅಧ್ಯಕ್ಷ ಹಣಮಂತ ಬುಳ್ಳಾ, ಎಸ್.ಟಿ. ಮೋರ್ಚಾ ನಗರ ಘಟಕದ ಅಧ್ಯಕ್ಷ ರಮೇಶ ಬಿರಾದಾರ, ಉಪಾಧ್ಯಕ್ಷರಾದ ಸಂಜು ಜಮಾದಾರ್, ದೀಪಕ್ ಚಿದ್ರಿ, ಅವಿನಾಶ ಬರಿದಾಬಾದೆ, ಅವಿನಾಶ, ವಾಲ್ಮಿಕಿ ಉಪಸ್ಥಿತರಿದ್ದರು.

ಬೀದರ್‌ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಹಾಗೂ ನಗರದ ಕೆಪಿ ಪ್ರೌಢ ಶಾಲೆಯಲ್ಲಿ ಸಂಸ್ಥೆಯ ಅಧ್ಯಕ್ಷ ಬಾಬು ವಾಲಿ ಅಂಬಿಗರ ಚೌಡಯ್ಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು