ಗುರುವಾರ , ಮೇ 13, 2021
17 °C

ಹುಮನಾಬಾದ್: ಸಾರ್ವಜನಿಕ ಆಸ್ಪತ್ರೆಗೆ ಆಂಬುಲೆನ್ಸ್‌ ಸೇವೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಮನಾಬಾದ್: ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಕೋವಿಡ್ ಸೋಂಕಿತರ ಮೃತದೇಹವನ್ನು ಸಾಗಿಸಲು ಶಾಸಕ ರಾಜಶೇಖರ ಪಾಟೀಲ ಅವರು ಒಂದು ಆಂಬುಲೆನ್ಸ್‌ ನೀಡಿದ್ದಾರೆ.

ಆಸ್ಪತ್ರೆಯ ಆವರಣದಲ್ಲಿ ಶುಕ್ರವಾರ ವಿಧಾನ ಪರಿಷತ್ ಸದಸ್ಯ ಡಾ.ಚಂದ್ರಶೇಖರ ಪಾಟೀಲ ಅವರು ಆಂಬುಲೆನ್ಸ್ ಅನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ವಿ.ಜಿ. ರೆಡ್ಡಿ ಅವರಿಗೆ ಹಸ್ತಾಂತರಿಸಿದರು.

ಒಂದು ವಾರದಿಂದ ಪ್ರತಿನಿತ್ಯ ಸೋಂಕಿತ ವ್ಯಕ್ತಿಗಳ ಸಾಗಣೆ, ಸೋಂಕಿತರ ಮೃತದೇಹವನ್ನು ಸಾಗಿಸಲು ಸೂಕ್ತ ಸಮಯಕ್ಕೆ ಆಂಬುಲೆನ್ಸ್‌ ಸಿಗದ ಕಾರಣ ಜನ ಪರದಾಡುತ್ತಿದ್ದರು. ಇದನ್ನು ಗಮನಿಸಿದ ಶಾಸಕ ರಾಜಶೇಖರ ಪಾಟೀಲ, ತಮ್ಮ ರಾಜರಾಜೇಶ್ವರಿ ಆಯುರ್ವೇದ ಕಾಲೇಜಿನ ಆಂಬುಲೆನ್ಸ್‌ ಅನ್ನು ಇಲ್ಲಿಯ ಸಾರ್ವಜನಿಕ ಆಸ್ಪತ್ರೆಯ ಸೇವೆಗೆ ನೀಡಿದ್ದಾರೆ.

ತಹಶೀಲ್ದಾರ್ ಜೈಶ್ರೀ, ತಾಲ್ಲೂಕು ಆರೋಗ್ಯಾಧಿಕಾರಿ ಶಿವಕುಮಾರ ಸಿದ್ದೇಶ್ವರ, ಸಾರ್ವಜನಿಕ ಆಸ್ಪತ್ರೆಯ ಮುಖ್ಯಾಧಿಕಾರಿ ಡಾ.ನಾಗನಾಥ ಹುಲಸೂರೆ, ತಾಲ್ಲೂಕು ಕೋವಿಡ್ ನೋಡಲ್ ಅಧಿಕಾರಿ ಡಾ.ಗೋವಿಂದ್, ಡಿವೈಎಸ್ಪಿ ಸೋಮಲಿಂಗ ಕುಂಬಾರ ಹಾಜರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.