ಶನಿವಾರ, ಸೆಪ್ಟೆಂಬರ್ 24, 2022
21 °C

ಬುದ್ಧಿ ಮಾಂದ್ಯ ಮಕ್ಕಳಿಗೆ ಆಂಬುಲನ್ಸ್ ವ್ಯವಸ್ಥೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಬರುವ ದಿನಗಳಲ್ಲಿ ನಗರದಲ್ಲಿ ಬುದ್ಧಿ ಮಾಂದ್ಯ ಮಕ್ಕಳಿಗೆ ಆಂಬುಲನ್ಸ್ ವ್ಯವಸ್ಥೆ ಮಾಡಲಾಗುವುದು ಎಂದು ರಾಜ್ಯ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ. ಶೈಲೇಂದ್ರ ಬೆಲ್ದಾಳೆ ಹೇಳಿದರು.

ನಗರದ ನವಜೀವನ ಬುದ್ಧಿ ಮಾಂದ್ಯ ಮಕ್ಕಳ ವಸತಿ ಶಾಲೆಗೆ ಫಿಜಿಯೊಥೆರಪಿ, ಅಮ್ಲಜನಕ ಯಂತ್ರ ಸೇರಿ ₹ 7 ಲಕ್ಷದ ವೈದ್ಯಕೀಯ ಉಪಕರಣಗಳನ್ನು ವಿತರಿಸಿ ಅವರು ಮಾತನಾಡಿದರು.

ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುವಾಲಿ, ಡಾ. ಬಿ.ಆರ್. ಅಂಬೇಡ್ಕರ್ ಕಲ್ಚರಲ್ ಆ್ಯಂಡ್ ವೆಲ್‍ಫೇರ್ ಸೊಸೈಟಿಯ ನಿರ್ದೇಶಕ ಅನಿಲಕುಮಾರ ಬೆಲ್ದಾರ್, ಜೆಸ್ಕಾಂ ನಿರ್ದೇಶಕ ಬಾಬುರಾವ್ ಕಾರಬಾರಿ, ಮುಖ್ಯಶಿಕ್ಷಕ ಪವೀಣ ಪಾಟೀಲ, ಮಹತ್ಮಾ ಜ್ಯೋತಿಬಾ ಫುಲೆ ವೃದ್ಧಾಶ್ರಮದ ಮೇಲ್ವಿಚಾರಕಿ ಬಾಲಾಜಿ ಪಿ, ಸಾವಿತ್ರಿ, ನೀಲಮ್ಮ, ಮಲಾಕಿ ಮೈಕಲ್, ರೇಣುಕಾ ಗೋಪಿಚಂದ್ ತಾಂದಳೆ, ರೈಚಲ್ ರಾಣಿ, ಬಾಲಾಜಿ ಇದ್ದರು. ವಿಜಯಲಕ್ಷ್ಮಿ ನಾಗೂರೆ ನಿರೂಪಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು