ಮಂಗಳವಾರ, ಜೂನ್ 28, 2022
28 °C

ಹುಮನಾಬಾದ್: ಹಳ್ಳಿಖೇಡ ಬಿ, ಚಿಟಗುಪ್ಪಕ್ಕೆ ಆಂಬುಲೆನ್ಸ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಮನಾಬಾದ್: 2019-20ನೇ ಸಾಲಿನ ಕೆಕೆಆರ್‌ಡಿಬಿ ಯೋಜನೆ ಅಡಿಯಲ್ಲಿ ಸುಮಾರು ₹45 ಲಕ್ಷ ಗಳಲ್ಲಿ ತಾಲ್ಲೂಕಿನ ಹಳ್ಳಿಖೇಡ ಬಿ. ಮತ್ತು ಚಿಟಗುಪ್ಪ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರಗಳಿಗೆ ಶಾಸಕ ರಾಜಶೇಖರ ಪಾಟೀಲ ಅವರು ತಲಾ ಒಂದು ಆಂಬುಲೆನ್ಸ್‌ ಹಸ್ತಾಂತರಿಸಿದರು.

‘ಸಾರ್ವಜನಿಕರು ಕೊರೊನಾ ಸೋಂಕಿನ ಬಗ್ಗೆ ನಿರ್ಲಕ್ಷ್ಯ ಮಾಡಬಾರದು. ಎಚ್ಚರಿಕೆ ವಹಿಸಬೇಕು’ ಎಂದು ಮನವಿ ಮಾಡಿದರು.

ವಿಧಾನ ಪರಿಷತ್ ಸದಸ್ಯ ಡಾ. ಚಂದ್ರಶೇಖರ ಪಾಟೀಲ ಮಾತನಾಡಿ, ‘ನೆಗಡಿ, ಕೆಮ್ಮು, ಜ್ವರ ಕಂಡುಬಂದರೆ ತಕ್ಷಣ ವೈದ್ಯರ ಸಲಹೆ ಪಡೆಯಬೇಕು. ಕಡ್ಡಾಯವಾಗಿ ಕೋವಿಡ್ ಲಸಿಕೆ ತೆಗೆದುಕೊಳ್ಳಬೇಕು’ ಎಂದು ಸಲಹೆ ಮಾಡಿದರು.

ಜಿಲ್ಲಾ ಪಂಚಾಯಿತಿ ಸದಸ್ಯ ಲಕ್ಷ್ಮಣರಾವ ಬುಳ್ಳಾ, ತಾ.ಪಂ ಮಾಜಿ ಅಧ್ಯಕ್ಷ ರಮೇಶ ಡಾಕುಳಗಿ, ಕಂಟೆಪ್ಪ ದಾನಾ, ಮಾಹಾಂತಯ್ಯ ತೀರ್ಥ, ಮಲ್ಲಿಕಾರ್ಜುನ ಮಾಶೆಟ್ಟಿ, ಕಸ್ತೂರ ಬಾಯಿ ಪರಸನೋರ್, ಅಭಿಷೇಕ ಪಾಟೀಲ, ಸೋಮಶೇಖರ ಪಾಟೀಲ, ರೇವಣಸಿದ್ದಪ್ಪ ಪಾಟೀಲ, ದತ್ತುಕುಮಾರ ಚಿದ್ರಿ, ಅಫ್ಸರ್ ಮಿಯ್ಯಾ, ರಾಜು ಇಟಗಿ, ಮಾಣಿಕ, ಸುರೇಶ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.