ಶುಕ್ರವಾರ, ಮೇ 27, 2022
22 °C
ಚಿಟ್ಟಾವಾಡಿ: ಅಂಗನವಾಡಿ ಕೇಂದ್ರ ‍ಪ್ರಾರಂಭೋತ್ಸವ

ಬೀದರ್: ‘ಕೋವಿಡ್ ನಿಯಮ ಪಾಲನೆ ಮಾಡಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ತಾಲೂಕಿನ ಘೋಡಂಪಳ್ಳಿ ವಲಯದ ಚಿಟ್ಟಾವಾಡಿ ಅಂಗನವಾಡಿ ಕೇಂದ್ರದಲ್ಲಿ ಇತ್ತೀಚೆಗೆ ಅಂಗನವಾಡಿ ಕೇಂದ್ರಗಳ ಪುನರ್ ಪ್ರಾರಂಭೋತ್ಸವ ಕಾರ್ಯಕ್ರಮ ನಡೆಯಿತು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಂಟಿ ನಿರ್ದೇಶಕಿ ಡಾ. ಉಷಾ ಬಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ‘ಕೋವಿಡ್‌ ಕಾರಣ ಒಂದೂವರೆ ವರ್ಷ ಅಂಗನವಾಡಿ ಕೇಂದ್ರಗಳು ನಡೆದಿರಲಿಲ್ಲ. ಈಗ ರಾಜ್ಯದ ಎಲ್ಲ ಅಂಗನವಾಡಿ ಕೇಂದ್ರಗಳು ಮತ್ತೆ ಆರಂಭವಾಗಿವೆ. ಕೇಂದ್ರದ ಸಿಬ್ಬಂದಿ ಕೋವಿಡ್ ನಿಯಮಗಳ ಪಾಲನೆ ಮಾಡಬೇಕು’ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಹೀರಾ ನಸೀಮ್ ಮಾತನಾಡಿದರು.

ಚಿಟ್ಟಾ ಗ್ರಾಮ ಪಂಚಾಯಿತಿ ಅಧ್ಯಕ್ಷ ರಮೇಶ ಬಿರಾದಾರ ಅಧ್ಯಕ್ಷತೆ ವಹಿಸಿದ್ದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ರವೀಂದ್ರ ಎಸ್. ರತ್ನಾಕರ್, ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ಜಗದೀಶ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಹಾಂತೇಶ ಭಜಂತ್ರಿ, ಹುಮನಾಬಾದ್ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಿವಪ್ರಕಾಶ ಹಿರೇಮಠ, ಚಿಟ್ಟಾ ಪಿಡಿಒ ಭೀಮರಾವ್, ಘೋಡಂಪಳ್ಳಿ ವಲಯದ ಮೇಲ್ವಿಚಾರಕಿ ಯಲ್ಲಮ್ಮ, ಚಿಟ್ಟಾ ಗ್ರಾಮ ಪಂಚಾಯಿತಿ ಸದಸ್ಯರು ಇದ್ದರು,

ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿ ಮಹಾಂತೇಶ ಭಂಜತ್ರಿ ನಿರೂಪಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.