ಶುಕ್ರವಾರ, 19 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಅಂಗನವಾಡಿ ಕೇಂದ್ರ ಮುಚ್ಚುವುದಿಲ್ಲ–ಸಚಿವ ಖಂಡ್ರೆ

Published 18 ಜೂನ್ 2024, 11:45 IST
Last Updated 18 ಜೂನ್ 2024, 11:45 IST
ಅಕ್ಷರ ಗಾತ್ರ

ಬೀದರ್‌: ‘ಯಾವುದೇ ಕಾರಣಕ್ಕೂ ಅಂಗನವಾಡಿ ಕೇಂದ್ರಗಳನ್ನು ಸರ್ಕಾರ ಮುಚ್ಚುವುದಿಲ್ಲ’ ಎಂದು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಖಾತೆ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದರು.

ನಗರದ ಜಿಲ್ಲಾ ಪಂಚಾಯಿತಿಯಲ್ಲಿ ಬುಧವಾರ ನಡೆದ ಕೆಡಿಪಿ ತ್ರೈಮಾಸಿಕ ಸಭೆಯಲ್ಲಿ ಮಾತನಾಡಿದ ಅವರು, ಅಂಗನವಾಡಿಗಳನ್ನು ಮುಚ್ಚುವ ಯಾವುದೇ ಪ್ರಸ್ತಾವ ಇಲ್ಲ. ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಯಾವುದೇ ಸಮಸ್ಯೆ ಆಗುವುದಿಲ್ಲ ಎಂದು ಹೇಳಿದರು.

ಎಲ್‌ಕೆಜಿ, ಯುಕೆಜಿ ಶಾಲೆಗಳಿಗೆ ಅಂಗನವಾಡಿ ಕಾರ್ಯಕರ್ತೆಯರನ್ನು ನಿಯೋಜಿಸಬೇಕೆಂಬ ಬೇಡಿಕೆ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ ಎಂದು ತಿಳಿಸಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT