ಶನಿವಾರ, 13 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಅಕ್ರಮ ಸಾಗಾಟ: ಪಡಿತರ ಅಕ್ಕಿ ಜಪ್ತಿ

Published 10 ಜುಲೈ 2024, 16:30 IST
Last Updated 10 ಜುಲೈ 2024, 16:30 IST
ಅಕ್ಷರ ಗಾತ್ರ

ಹುಮನಾಬಾದ್: ತಾಲ್ಲೂಕಿನ ಅಮೀರಾಬಾದ್ ವಾಡಿ ಕ್ರಾಸ್ ಹತ್ತಿರದಲ್ಲಿ ಅಕ್ರಮವಾಗಿ ಪಡಿತರ ಚೀಟಿ ಅಕ್ಕಿ ಸಾಗಿಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿ 898 ಕೆ.ಜೆ ಅಕ್ಕಿ ವಶಪಡಿಸಿಕೊಂಡಿದ್ದಾರೆ.

ಪಡಿತರ ಅಕ್ಕಿಯನ್ನು ತೆಗೆದುಕೊಂಡು ಹೋಗಿ ಹೊಸಕನಳ್ಳಿ ಗ್ರಾಮದ ವ್ಯಕ್ತಿಯೊಬ್ಬರ ಮನೆಯಲ್ಲಿ ಸಂಗ್ರಹಿಸಿರುವ ಮಾಹಿತಿ ಮೇರೆಗೆ ಎರಡು ಕಡೆ ದಾಳಿ ಮಾಡಿ 898 ಕೆ.ಜಿ. ಅಕ್ಕಿ ಒಂದು ಟಿವಿಎಸ್ ಮೋಟಾರ್ ಸೈಕಲ್ ಸೇರಿದಂತೆ ಒಟ್ಟು ₹45 ಸಾವಿರ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಇಬ್ಬರು ಆರೋಪಿಗಳ ವಿರುದ್ಧ ಹಳಿಖೇಡ್ ಬಿ. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರ್ಯಾಚರಣೆಯಲ್ಲಿ ಪಿಎಸ್ಐ ಅಯ್ಯಪ್ಪ, ಆಹಾರ ಇನ್‌ಸ್ಪೆಕ್ಟರ್ ಬಿಂದುಕುಮಾರಿ ಸೇರಿದಂತೆ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT