ಭಾನುವಾರ, ಫೆಬ್ರವರಿ 23, 2020
19 °C

ಅನರ್ಹರು ಅಂತ್ಯೋದಯ ಕಾರ್ಡ್‌ ಹಿಂತಿರುಗಿಸಿ: ಜಿಲ್ಲಾಧಿಕಾರಿ ಸೂಚನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್‌: ಅಂತ್ಯೋದಯ ಪಡಿತರ ಚೀಟಿಗೆ ಅರ್ಹರಲ್ಲದವರು ಬಿಪಿಎಲ್ ಕಾರ್ಡ್‌ ಪಡೆದುಕೊಂಡಿದ್ದಾರೆ. ಅವರು ತಕ್ಷಣ ಅದನ್ನು ಹಿಂತಿರುಗಿಸಬೇಕು ಎಂದು ಜಿಲ್ಲಾಧಿಕಾರಿ ಎಚ್.ಆರ್‌.ಮಹಾದೇವ ಸೂಚಿಸಿದ್ದಾರೆ.

ಸರ್ಕಾರ ಅಥವಾ ಸರ್ಕಾರದಿಂದ ಅನುದಾನವನ್ನು ಪಡೆಯುತ್ತಿರುವ ಸಂಸ್ಥೆಗಳು, ಸರ್ಕಾರಿ ಪ್ರಾಯೋಜಿತ ಸ್ವಾಮ್ಯದ ಸಂಸ್ಥೆಗಳು, ಮಂಡಳಿಗಳು, ನಿಗಮಗಳು, ಸ್ವಾಯತ್ತ ಸಂಸ್ಥೆಗಳು ಸೇರಿ ಆದಾಯ ತೆರಿಗೆ, ಸೇವಾ ತೆರಿಗೆ, ವೃತ್ತಿ ತೆರಿಗೆ ಪಾವತಿಸುವ ಎಲ್ಲ ಕುಟುಂಬಗಳಿಗೆ ಅನ್ವಯವಾಗುತ್ತದೆ ಎಂದು ತಿಳಿಸಿದರು.

ಗ್ರಾಮೀಣ ಪ್ರದೇಶದಲ್ಲಿ 3 ಹೆಕ್ಟೇರ್ ಒಣಭೂಮಿ, ತತ್ಸಮಾನ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು, ಗ್ರಾಮೀಣ ಪ್ರದೇಶವನ್ನು ಹೊರುತುಪಡಿಸಿ ನಗರ ಪ್ರದೇಶಗಳಲ್ಲಿ 1 ಸಾವಿರ ಚದರ ಅಡಿಗಿಂತಲೂ ಹೆಚ್ಚಿನ ವಿಸ್ತೀರ್ಣದ ಮನೆ ಹೊಂದಿರುವ ಕುಟುಂಬಗಳು ಪಡಿತರ ಚೀಟಿ ಪಡೆಯಲು ಅರ್ಹರಲ್ಲ ಎಂದು ಹೇಳಿದ್ದಾರೆ.

ಜೀವನೋಪಾಯ ಕ್ಕಾಗಿ ಬಳಸುವ ವಾಹನ ಅಂದರೆ ಟ್ರ್ಯಾಕ್ಟರ್, ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿ ಇತ್ಯಾದಿಗಳನ್ನು ಹೊಂದಿದ ಕುಟುಂಬವನ್ನು ಹೊರತುಪಡಿಸಿ ನಾಲ್ಕು ಚಕ್ರದ ವಾಹನಗಳನ್ನು ಹೊಂದಿರುವ ಎಲ್ಲ ಕುಟುಂಬಗಳು, ಕುಟುಂಬದ ವಾರ್ಷಿಕ ಆದಾಯವು ₹1.20 ಲಕ್ಷಕ್ಕಿಂತಲೂ ಹೆಚ್ಚು ಇರುವ ಕುಟುಂಬಗಳು ಅಂತ್ಯೋದಯ, ಅನ್ನಯೋಜನೆ ಮತ್ತು ಆದ್ಯತಾ ಪಡಿತರ ಚೀಟಿ (ಬಿಪಿಎಲ್) ಪಡೆಯಲು ಅರ್ಹರಿರುವುದಿಲ್ಲ ಎಂದು ಸೂಚಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಆರ್ಥಿಕವಾಗಿ ಸಬಲ ಮತ್ತು ಇತರೆ ಅನರ್ಹರು ಹೊಂದಿರುವ ಅಂತ್ಯೋದಯ ಅನ್ನ ಮತ್ತು ಆದ್ಯತಾ (ಬಿಪಿಎಲ್) ಪಡಿತರ ಚೀಟಿಗಳನ್ನು ಹಿಂದಿರುಗಿಸಲು ಪದೇ ಪದೇ ಮನವಿ ಮಾಡಲಾಗಿದೆ. ಈ ಮನವಿಗೆ ಕೆಲವರು ಸ್ಪಂದಿಸಿ ಬಿಪಿಎಲ್ ಪಡಿತರ ಚೀಟಿಗಳನ್ನು ಹಿಂದಿರುಗಿಸಿ ಎಪಿಎಲ್ ಪಡೆದಿದ್ದಾರೆ ಎಂದು ತಿಳಿಸಿದ್ದಾರೆ.

 ಸಾವಿರಾರು ಅನರ್ಹರು ಹೊಂದಿರುವ ಬಿಪಿಎಲ್ ಪಡಿತರ ಚೀಟಿಯನ್ನು ಈಗಾಗಲೇ ಪತ್ತೆಹಚ್ಚಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸುವ ಕಾರ್ಯವನ್ನು ಆರಂಭಿಸಲಾಗಿದೆ. ತನಿಖೆಯ ಸಂದರ್ಭದಲ್ಲಿ ಅನರ್ಹರು ಬಿಪಿಎಲ್‌ ಪಡಿತರ ಚೀಟಿ ಹೊಂದಿರುವುದು ಕಂಡು ಬಂದರೆ ಅಂತವರ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು