ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಸವಕಲ್ಯಾಣದಲ್ಲಿ ಅನುಭವ ಮಂಟಪ ಉತ್ಸವಕ್ಕೆ ಚಾಲನೆ

ವಿಶ್ವ ಬಸವಧರ್ಮ ಟ್ರಸ್ಟ್ ನಿಂದ ಪಟ್ಟಣದಲ್ಲಿ ಹಮ್ಮಿಕೊಂಡಿರುವ ಎರಡು ದಿನಗಳ ಅನುಭವ ಮಂಟಪ ಉತ್ಸವ ಹಾಗೂ 44ನೇ ಶರಣ ಕಮ್ಮಟಕ್ಕೆ ಶನಿವಾರ ಚಾಲನೆ ನೀಡಲಾಯಿತು.
Published 25 ನವೆಂಬರ್ 2023, 11:40 IST
Last Updated 25 ನವೆಂಬರ್ 2023, 11:40 IST
ಅಕ್ಷರ ಗಾತ್ರ

ಬಸವಕಲ್ಯಾಣ: ವಿಶ್ವ ಬಸವಧರ್ಮ ಟ್ರಸ್ಟ್ ನಿಂದ ಪಟ್ಟಣದಲ್ಲಿ ಹಮ್ಮಿಕೊಂಡಿರುವ ಎರಡು ದಿನಗಳ ಅನುಭವ ಮಂಟಪ ಉತ್ಸವ ಹಾಗೂ 44ನೇ ಶರಣ ಕಮ್ಮಟಕ್ಕೆ ಶನಿವಾರ ಚಾಲನೆ ನೀಡಲಾಯಿತು.

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ಅರಣ್ಯ, ಪರಿಸರ ಸಚಿವ ಈಶ್ವರ ಬಿ. ಖಂಡ್ರೆ, ಪೌರಾಡಳಿತ ಸಚಿವ ರಹೀಂ ಖಾನ್, ವಿಧಾನ ಪರಿಷತ್ ಸದಸ್ಯ ಚಂದ್ರಶೇಖರ ಪಾಟೀಲ, ಭೀಮರಾವ ಪಾಟೀಲ, ಶಾಸಕ ಶರಣು ಸಲಗರ, ಸುತ್ತೂರಿ‌ನ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಹಾರಕೂಡದ ಚನ್ನವೀರ ಶಿವಾಚಾರ್ಯರು, ಹುಲಸೂರಿನ ಶಿವಾನಂದ ಸ್ವಾಮೀಜಿ, ಬಸವಕಲ್ಯಾಣ ಅನುಭವ ಮಂಟಪದ ಬಸವಲಿಂಗ ಪಟ್ಟದ್ದೇವರು, ಭಾಲ್ಕಿ ಹಿರೇಮಠದ ಗುರುಬಸವ ಪಟ್ಟದ್ದೇವರು, ವಿ. ಸಿದ್ದರಾಮಣ್ಣ, ನಿವೃತ್ತ ನ್ಯಾಯಮೂರ್ತಿ ಶಿವರಾಜ ಪಾಟೀಲ, ಐಪಿಎಸ್ ಅಧಿಕಾರಿ ಸಂದೀಪ ಪಾಟೀಲ, ಮುಖಂಡರಾದ ಬಸವರಾಜ ಪಾಟೀಲ ಸೇಡಂ, ಗುರುನಾಥ ಕೊಳ್ಳೂರ, ಬಾಬುವಾಲಿ, ಬಸವರಾಜ ಬುಳ್ಳಾ, ಜಿಪಂ ಸಿಇಒ ಶಿಲ್ಪಾ ಎಂ‌. ಹಾಜರಿದ್ದರು.

ರಾಜ್ಯದ ವಿವಿಧ ಭಾಗದ ಬಸವ ಭಕ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕನೆಂದು ಘೋಷಿಸಲು ಆಗ್ರಹ

ಬಸವಕಲ್ಯಾಣ ಅನುಭವ ಮಂಟಪದ ಮುಖ್ಯಸ್ಥ ಬಸವಲಿಂಗ ಪಟ್ಟದ್ದೇವರು ಮಾತನಾಡಿ, ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕರೆಂದು ಘೋಷಿಸಬೇಕು. ಸಮ ಸಮಾಜಕ್ಕಾಗಿ ಶ್ರಮಿಸಿದವರು ಬಸವಣ್ಣನವರು ಎಂದರು.

ಸುಪ್ರೀಂಕೋರ್ಟಿನ ನಿವೃತ್ತ ನ್ಯಾಯಮೂರ್ತಿ ಶಿವರಾಜ ಪಾಟೀಲ ಅವರಿಗೆ ಡಾ. ಚನ್ನಬಸವ ಪಟ್ಟದ್ದೇವರು ಅನುಭವ ಮಂಟಪ ಪ್ರಶಸ್ತಿ ಹಾಗೂ ಸಾಹಿತಿ ಬಿ.ವಿ. ಶಿರೂರ ಅವರಿಗೆ ಡಾ.ಎಂ.ಎಂ. ಕಲಬುರಗಿ ಸಾಹಿತ್ಯ ಸಂಶೋಧನ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಾಯಿತು. ಎರಡು ಪ್ರಶಸ್ತಿಗಳು ಕ್ರಮವಾಗಿ ₹1 ಲಕ್ಷ ಹಾಗೂ ₹50 ಸಾವಿರ ನಗದು, ಪ್ರಶಸ್ತಿ ಪತ್ರ ಒಳಗೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT