ಸೋಮವಾರ, ನವೆಂಬರ್ 23, 2020
22 °C

ಅನುಭವ ಮಂಟಪದ ಟೆಂಡರ್ ಪ್ರಕ್ರಿಯೆ ಶೀಘ್ರ: ಬಿ.ವೈ.ವಿಜಯೇಂದ್ರ ಹೇಳಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಸವಕಲ್ಯಾಣ: ‘ಬಸವಾದಿ ಶರಣರ ಕುರುಹಾದ ಅನುಭವ ಮಂಟಪಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ₹ 500 ಕೋಟಿ ಅನುದಾನ ಒದಗಿಸಿದ್ದು, ಕಟ್ಟಡ ಕಾಮಗಾರಿಗೆ ಶೀಘ್ರ ಟೆಂಡರ್ ಪ್ರಕ್ರಿಯೆ ಆರಂಭವಾಗಲಿದೆ’ ಎಂದು ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.
                   
ಇಲ್ಲಿನ ಅನುಭವ ಮಂಟಪದಲ್ಲಿ ಶುಕ್ರವಾರ ವಿಶ್ವ ಬಸವಧರ್ಮ ವಿಶ್ವಸ್ಥ ಮಂಡಳಿ ವತಿಯಿಂದ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. 

‘ಸರ್ಕಾರ, ಮಂಟಪದ ಕಾಮಗಾರಿಗೆ ತಕ್ಷಣ ₹ 10 ಕೋಟಿ ಬಿಡುಗಡೆ ಮಾಡಲಿದೆ. ಈಗಾಗಲೇ ಹಿರಿಯ ಐಎಎಸ್ ಅಧಿಕಾರಿ ಡಾ.ಎಚ್.ಆರ್.ಮಹಾದೇವ ಅವರನ್ನು ಮಂಡಳಿ ವಿಶೇಷಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ. 50 ಎಕರೆ ಜಮೀನನ್ನು ಅನುಭವ ಮಂಟಪಕ್ಕೆ ವರ್ಗಾಯಿಸುವ ಕಾರ್ಯ ನಡೆದಿದೆ’ ಎಂದು ತಿಳಿಸಿದರು.

‘ಕರ್ನಾಟಕ ಅಂದರೆ ಸಮಾನತೆಯ ನಾಡು. ಇದು ಮಠಗಳ ನಾಡು ಕೂಡ ಅಗಿದೆ. ಮಠಗಳು ಅನ್ನ, ಜ್ಞಾನ ದಾಸೋಹದ ಕೇಂದ್ರಗಳಾಗಿ ಗುರುತಿಸಿಕೊಂಡಿವೆ. ತಂದೆಯವರಾದ ಯಡಿಯೂರಪ್ಪ ಅವರಂತೆ ರಾಜಕೀಯದಲ್ಲಿ ಪಾಲ್ಗೊಳ್ಳುವ ಮೂಲಕ ಸಮಾಜಸೇವೆಯಲ್ಲಿ ತೊಡಗಿಸಿಕೊಳ್ಳಲು ನಿರ್ಧರಿಸಿದ್ದೇನೆ. ಅದಕ್ಕೆ ಮಠಾಧೀಶರ ಆಶೀರ್ವಾದ ಬೇಕು’ ಎಂದು ಮನವಿ ಮಾಡಿದರು.

ಮರಾಠಾ ಸಮಾಜದ ಮುಖಂಡರ ಸಭೆಯಲ್ಲಿ ಪಾಲ್ಗೊಳ್ಳುವ ಮೊದಲು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಅವರು, ‘ಇದು ಪೂರ್ವನಿರ್ಧಾರಿತ ಅಲ್ಲ. ಅನುಭವ ಮಂಟಪದ ದರ್ಶನ ಪಡೆಯಲು ಸಹಜವಾಗಿ ಬಸವಕಲ್ಯಾಣಕ್ಕೆ ಬಂದಿದ್ದೇನೆ’ ಎಂದು ತಿಳಿಸಿದರು.

ಭಾಲ್ಕಿ ಬಸವಲಿಂಗ ಪಟ್ಟದ್ದೇವರು ಮಾತನಾಡಿದರು. ಬೀದರ್ ಸಂಸದ ಭಗವಂತ ಖೂಬಾ, ಕಲಬುರ್ಗಿ ಸಂಸದ ಡಾ.ಉಮೇಶ ಜಾಧವ, ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ, ವಿಧಾನಪರಿಷತ್ ಸದಸ್ಯ ಶಶಿಲ್ ನಮೋಶಿ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು