ಭಾಲ್ಕಿ: ಪಟ್ಟಣದ ವಿವಿಧ ಬ್ಯಾಂಕ್‌ಗಳಿಗೆ ಗುರುವಾರ ಪುರಸಭೆ ಮುಖ್ಯಾಧಿಕಾರಿ ಡಾ.ಶಿವರಾಜ ರಾಠೋಡ್ ಅವರು ಭೇಟಿ ನೀಡಿ ಬೀದಿ ಬದಿ ವ್ಯಾಪಾರಿಗಳಿಗೆ ಸಕಾಲಕ್ಕೆ ಸಾಲ ಸೌಲಭ್ಯ ಕಲ್ಪಿಸುವಂತೆ ಮನವಿ ಮಾಡಿದರು.
ಬೀದಿ ಬದಿ ವ್ಯಾಪಾರಿಗಳ ಸಂಘ ಸಾಲ ಸೌಲಭ್ಯ ನೀಡಲು ಬ್ಯಾಂಕ್‍ಗಳು ವಿಳಂಬ ಮಾಡುತ್ತಿರುವ ಬಗ್ಗೆ ದೂರು ನೀಡಿರುವ ಹಿನ್ನೆಲೆಯಲ್ಲಿ ಪಟ್ಟಣದ ಇಂಡಿಯನ್ ಓವರ್‌ಸೀಸ್ ಬ್ಯಾಂಕ್, ಕರ್ನಾಟಕ ಗ್ರಾಮೀಣ ಪ್ರಗತಿ ಬ್ಯಾಂಕ್ ಸೇರಿ ವಿವಿಧ ಬ್ಯಾಂಕ್‌ಗಳಿಗೆ ಭೇಟಿ ನೀಡಿ ವ್ಯವಸ್ಥಾಪಕರನ್ನು ಸಂಪರ್ಕಿಸಿ ಕೇಂದ್ರದ ಆತ್ಮನಿರ್ಭರ ಯೋಜನೆಯಡಿ ಬೀದಿ ಬದಿ ವ್ಯಾಪಾರಿಗಳಿಗೆ ತಲಾ ₹10 ಸಾವಿರ ಸಾಲ ಸೌಲಭ್ಯ ಕಲ್ಪಿಸಿದೆ. ನೋಂದಾಯಿತ ಎಲ್ಲ ಬೀದಿ ಬದಿ ವ್ಯಾಪಾರಿಗಳಿಗೆ ನೀಡುವಂತೆ ಮನವಿ ಮಾಡಿದರು.
ಇಲ್ಲಿವರೆಗೂ ಸಾಲ ಸೌಲಭ್ಯಕ್ಕಾಗಿ ವಿವಿಧ ಬ್ಯಾಂಕ್‍ಗಳಲ್ಲಿ 275 ಬೀದಿ ಬದಿ ವ್ಯಾಪಾರಿಗಳು ಆನ್‌ಲೈನ್ ಅರ್ಜಿ ಸಲ್ಲಿಸಿದ್ದಾರೆ. ಅದರಲ್ಲಿ 142 ಫಲಾನುಭವಿಗಳಿಗೆ ಸಾಲ ಸೌಲಭ್ಯ ಸಿಕ್ಕಿದೆ. ಇನ್ನೂ 133 ಫಲಾನುಭವಿಗಳಿಗೆ ಸಾಲ ಸಿಕ್ಕಿಲ್ಲ. ತಾಂತ್ರಿಕ ದೋಷಗಳನ್ನು ಸರಿಪಡಿಸಿ ತಕ್ಷಣ ಎಲ್ಲರಿಗೂ ಸಾಲ ಸೌಲಭ್ಯ ನೀಡುವಂತೆ ಮನವಿ ಮಾಡಿದರು. ಪುರಸಭೆ ಸಮುದಾಯ ಸಂಘಟಕ ಸ್ವಾಮಿದಾಸ್, ಜಿಲ್ಲಾ ಬೀದಿ ಬದಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ದಿಲೀಪ ಜೋಳದಾಪಕೆ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.