ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಜಪೇಯಿ ವಸತಿ ಕಾಲೇಜು ಪ್ರವೇಶಕ್ಕೆ ಅರ್ಜಿ ಆಹ್ವಾನ

Last Updated 18 ಆಗಸ್ಟ್ 2020, 8:36 IST
ಅಕ್ಷರ ಗಾತ್ರ

ಬೀದರ್: ಜಿಲ್ಲೆಯ ಅಟಲ್ ಬಿಹಾರಿ ವಾಜಪೇಯಿ ಹಾಗೂ ಮೊರಾರ್ಜಿ ದೇಸಾಯಿ ವಸತಿ ಕಾಲೇಜುಗಳ ವಿಜ್ಞಾನ ವಿಭಾಗದಲ್ಲಿ ಪಿಯುಸಿ ಪ್ರಥಮ ವರ್ಷದ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ತಾಲ್ಲೂಕಿನ ಕಮಠಾಣದಲ್ಲಿ ಈಗಾಗಲೇ ಮೊರಾರ್ಜಿ ದೇಸಾಯಿ ವಸತಿ ಪದವಿಪೂರ್ವ ಕಾಲೇಜು ಕಾರ್ಯ ನಿರ್ವಹಿಸುತ್ತಿದೆ. ರಾಜ್ಯ ಸರ್ಕಾರ 2020-21ನೇ ಸಾಲಿಗೆ ಜಿಲ್ಲೆಗೆ ಅಟಲ್ ಬಿಹಾರಿ ವಾಜಪೇಯಿ ವಸತಿ ಕಾಲೇಜು ಮಂಜೂರು ಮಾಡಿದೆ.

ಈ ಎರಡೂ ಕಾಲೇಜುಗಳಲ್ಲಿ ಪಿಸಿಎಂಬಿ ಹಾಗೂ ಪಿಸಿಎಂಸಿಎಸ್ ಕಾಂಬಿನೇಶನ್‍ಗಳು ಇವೆ. ಒಂದೊಂದರಲ್ಲಿ 40 ವಿದ್ಯಾರ್ಥಿಗಳು ಪ್ರವೇಶ ಪಡೆಯಬಹುದಾಗಿದೆ. ಊಟ, ವಸತಿ, ಸಮವಸ್ತ್ರ, ಪಠ್ಯಪುಸ್ತಕ, ಉಚಿತ ನೀಟ್, ಸಿಇಟಿ, ಜೆಇಇ ತರಬೇತಿ ಸೌಲಭ್ಯ ಇದೆ.

ಅರ್ಜಿಗಳನ್ನು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವೆಬ್‍ಸೈಟ್ kreis ನಿಂದ ಡೌನ್ ಲೋಡ್ ಮಾಡಿಕೊಂಡು ಇಲ್ಲವೇ ಹತ್ತಿರದ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಅಟಲ್ ಬಿಹಾರಿ ವಾಜಪೇಯಿ, ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಇಂದಿರಾಗಾಂಧಿ ವಸತಿ ಶಾಲೆಗಳಿಂದ ಪಡೆದು ಭರ್ತಿ ಮಾಡಿ ಖುದ್ದಾಗಿ ಶಾಲೆಗಳಲ್ಲಿ ಅಥವಾ ಕಾಲೇಜುಗಳಲ್ಲಿ ಆಗಸ್ಟ್ 22 ರಂದು ಸಂಜೆ 5 ಗಂಟೆಯ ಒಳಗೆ ಸಲ್ಲಿಸಬೇಕು.

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಪಡೆದ ಅಂಕ ಹಾಗೂ ಮೀಸಲಾತಿ ಅನ್ವಯ ವಿದ್ಯಾರ್ಥಿಗಳ ಆಯ್ಕೆ ನಡೆಯಲಿದೆ. ಹೆಚ್ಚಿನ ಮಾಹಿತಿಗೆ 7899998755 ಅಥವಾ 9242301487 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಜಿಲ್ಲಾ ಸಮನ್ವಯಾಧಿಕಾರಿ ಶರಣಪ್ಪ ಬಿರಾದಾರ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT