ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಆಹ್ವಾನ
ಬೀದರ್: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಜಿಲ್ಲೆಯಲ್ಲಿ 77 ಅಂಗನವಾಡಿ ಕಾರ್ಯಕರ್ತೆಯರು ಮತ್ತು 161 ಸಹಾಯಕಿಯರ ಆಯ್ಕೆಗೆ ಆನ್‍ಲೈನ್‍ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
ಬೀದರ್ ತಾಲ್ಲೂಕಿನಲ್ಲಿ 10 ಕಾರ್ಯಕರ್ತೆಯರು, 40 ಸಹಾಯಕಿಯರು, ಭಾಲ್ಕಿ ತಾಲ್ಲೂಕಿನಲ್ಲಿ 17 ಕಾರ್ಯಕರ್ತೆಯರು, 29 ಸಹಾಯಕಿಯರು, ಹುಮನಾಬಾದ್ ತಾಲ್ಲೂಕಿನಲ್ಲಿ 8 ಕಾರ್ಯಕರ್ತೆಯರು, 25 ಸಹಾಯಕಿಯರು, ಬಸವಕಲ್ಯಾಣ ತಾಲ್ಲೂಕಿನಲ್ಲಿ 23 ಕಾರ್ಯಕರ್ತೆಯರು, 33 ಸಹಾಯಕಿಯರು, ಔರಾದ್ ತಾಲ್ಲೂಕಿನಲ್ಲಿ 19 ಕಾರ್ಯಕರ್ತೆಯರು ಹಾಗೂ 34 ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಫೆಬ್ರುವರಿ 6ರ ಒಳಗೆ www.anganwadirecruit.kar.nic.in <http://www.anganwadirecruit.kar.nic.in> ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.