ಬೀದರ್: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ವ್ಯಕ್ತಿಗಳು ಹಾಗೂ ಸಂಸ್ಥೆಗಳಿಗೆ ನೀಡಲಾಗುವ ರಾಜ್ಯಮಟ್ಟದ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ 5 ವರ್ಷ ಸೇವೆ ಸಲ್ಲಿಸಿದ ವ್ಯಕ್ತಿಗಳು, ಸಂಸ್ಥೆಗಳು ಅರ್ಜಿ ಸಲ್ಲಿಸಬಹುದು. ಆಯ್ಕೆಯಾದ ವ್ಯಕ್ತಿಗಳಿಗೆ ₹ 2,5000 ನಗದು ಹಾಗೂ ಪ್ರಶಸ್ತಿ ಪತ್ರ ಮತ್ತು ಸಂಸ್ಥೆಗಳಿಗೆ ₹ 1 ಲಕ್ಷ ನಗದು ಹಾಗೂ ಪ್ರಶಸ್ತಿ ಪತ್ರ ನೀಡಲಾಗುವುದು.
ಆಸಕ್ತರು ನಿಗದಿತ ನಮೂನೆಯಲ್ಲಿ ಅಕ್ಟೋಬರ್ 4 ರ ಒಳಗೆ ಅರ್ಜಿ ಸಲ್ಲಿಸಬಹುದು ಎಂದು ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರ ಕಚೇರಿಯ ದೂರವಾಣಿ ಸಂಖ್ಯೆ 08482-233146 ಗೆ ಸಂಪರ್ಕಿಸಬಹುದು ಎಂದು ಹೇಳಿದ್ದಾರೆ.