ಮಂಗಳವಾರ, ಸೆಪ್ಟೆಂಬರ್ 28, 2021
25 °C

ತರಬೇತಿಗೆ ನಿರುದ್ಯೋಗಿಗಳಿಂದ ಅರ್ಜಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೀದರ್: ಇಲ್ಲಿಯ ಸನ್‍ಸಾಫ್ಟ್ ಪದವಿ ಕಾಲೇಜು ಹಾಗೂ ಮಿತ್ರಾ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ವತಿಯಿಂದ ಮುಖ್ಯಮಂತ್ರಿಗಳ ಕೌಶಲ ಅಭಿವೃದ್ಧಿ ಯೋಜನೆಯಡಿ ನಿರುದ್ಯೋಗಿಗಳಿಗೆ ಉದ್ಯೋಗ ಆಧಾರಿತ ಉಚಿತ ತರಬೇತಿ ಹಮ್ಮಿಕೊಳ್ಳಲಾಗಿದೆ.

ಕಂಪ್ಯೂಟರ್, ಸ್ಪೊಕನ್ ಇಂಗ್ಲಿಷ್, ವ್ಯಕ್ತಿತ್ವ ವಿಕಸನ, ಕೌಶಲ ಕುರಿತು ಮೂರು ತಿಂಗಳ ತರಬೇತಿ ಕೊಡಲಾಗುವುದು ಎಂದು ಮಿತ್ರಾ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಕಾರ್ಯದರ್ಶಿ ಜಗಮೋಹನ್ ರಾಜಪೂತ್ ತಿಳಿಸಿದ್ದಾರೆ.

ತರಬೇತಿ ಪೂರ್ಣಗೊಳಿಸಿದವರಿಗೆ ರಾಜ್ಯ ಸರ್ಕಾರದಿಂದ ಪ್ರಮಾಣ ಪತ್ರ ನೀಡಲಾಗುವುದು. ವಿದ್ಯಾರ್ಹತೆ ಹಾಗೂ ಸಾಮರ್ಥ್ಯಕ್ಕೆ ಅನುಗುಣವಾಗಿ ರಾಜ್ಯ, ದೇಶದ ಹೆಸರಾಂತ ಕಂಪನಿಗಳಲ್ಲಿ ಊಟ, ವಸತಿಯೊಂದಿಗೆ ಆಕರ್ಷಕ ವೇತನದ ನೌಕರಿ ದೊರಕಿಸಿಕೊಡಲಾಗುವುದು ಎಂದು ಹೇಳಿದ್ದಾರೆ.

ಪಿಯುಸಿ ಅಥವಾ ತತ್ಸಮಾನ, ಐಟಿಐ, ಡಿಪ್ಲೊಮಾ, ಪದವಿ ಪೂರೈಸಿದ ಅಭ್ಯರ್ಥಿಗಳು ತರಬೇತಿಗೆ ಅರ್ಹರು. ಆಸಕ್ತರು ತಮ್ಮ ಆಧಾರ್ ಕಾರ್ಡ್, ಅಂಕ ಪಟ್ಟಿ, ಜಾತಿ, ಆದಾಯ ಪ್ರಮಾಣ ಪತ್ರ ಹಾಗೂ ನಾಲ್ಕು ಪಾಸ್‍ಪೊರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗೆ ಕುಂಬಾರವಾಡ ಕ್ರಾಸ್‍ನ ಸನ್ ಸೆಂಟರ್‌ನ ಮೊದಲ ಹಾಗೂ ಎರಡನೇ ಮಹಡಿಯಲ್ಲಿರುವ ಸನ್‍ಸಾಫ್ಟ್ ಪದವಿ ಕಾಲೇಜಿಗೆ ಅಥವಾ ಮೊಬೈಲ್ ಸಂಖ್ಯೆ 9241206654, 6363501196, 9590856271ಗೆ ಸಂಪರ್ಕಿಸಬಹುದು ಎಂದು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.