ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಮಾಜ ಕಲ್ಯಾಣ ಇಲಾಖೆ ವಸತಿ ನಿಲಯಕ್ಕೆ ಅರ್ಜಿ ಆಹ್ವಾನ

Published 5 ಜೂನ್ 2023, 16:30 IST
Last Updated 5 ಜೂನ್ 2023, 16:30 IST
ಅಕ್ಷರ ಗಾತ್ರ

ಭಾಲ್ಕಿ: ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆ ಅಧೀನದಲ್ಲಿ ನಡೆಯುವ ವಿವಿಧ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯದ ಪ್ರವೇಶಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಸತೀಶಕುಮಾರ ಸಂಗನ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, 2023-24ನೇ ಸಾಲಿನಲ್ಲಿ ಖಾಲಿಯಿರುವ ಮೆಟ್ರಿಕ್ ಪೂರ್ವ ಬಾಲಕರ ನಿಲಯ ಭಾಲ್ಕಿ, ಖಟಕ್ ಚಿಂಚೋಳಿ, ಲಖಣಗಾಂವ, ನಿಟ್ಟೂರು(ಬಿ), ವರವಟ್ಟಿ, ಮೇಹಕರ, ಹಲಬರ್ಗಾ, ಕಲವಾಡಿ ಮತ್ತು ಬಾಲಕಿಯರ ವಸತಿ ನಿಲಯ ಪ್ರವೇಶಕ್ಕೆ ಅರ್ಜಿ ಕರೆಯಲಾಗಿದೆ. ಅದರಂತೆ ಇಲಾಖೆಯ ವಿವಿಧ ವಿದ್ಯಾರ್ಥಿ ನಿಲಯಗಳಲ್ಲಿ 5ನೇ ತರಗತಿಯಿಂದ 10ನೇ ತರಗತಿವರೆಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳು ತಮ್ಮ ಸ್ಯಾಟ್ ಐಡಿಯೊಂದಿಗೆ ರಾಜ್ಯ ವಿದ್ಯಾರ್ಥಿ ನಿಲಯದ ತಂತ್ರಾಂಶ http://shp.karnataka.gov.in/ಅರ್ಜಿ ಸಲ್ಲಿಸಬಹುದಾಗಿದೆ. ಜೂನ್‌ 16 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT